ಗುರುವಾರ, 20 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಜಿ ಫುಟ್‌ಬಾಲ್‌ ಆಟಗಾರನಿಂದ ಇಬ್ಬರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ

Published 29 ಮೇ 2024, 3:05 IST
Last Updated 29 ಮೇ 2024, 3:05 IST
ಅಕ್ಷರ ಗಾತ್ರ

ನ್ಯೂಯಾರ್ಕ್‌: ಅಮೆರಿಕದ ಮಾಜಿ ಫುಟ್‌ಬಾಲ್‌ ಆಟಗಾರ ಮ್ಯಾಕ್ಮನಸ್ ವಿರುದ್ಧ ಲೈಂಗಿಕ ದೌರ್ಜನ್ಯದ ದೂರು ದಾಖಲಾಗಿದೆ.

ವಿಮಾನದ ಇಬ್ಬರು ಮಹಿಳಾ ಸಿಬ್ಬಂದಿ ಈ ದೂರು ನೀಡಿದ್ದಾರೆ ಎಂದು ಬಿಬಿಸಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ಸೆಪ್ಟೆಂಬರ್‌ 2023ರಲ್ಲಿ ಅಮೆರಿಕದ ಜಾಗ್ವಾರ್ಸ್ ಫುಟ್‌ಬಾಲ್‌ ತಂಡ ಲಂಡನ್‌ಗೆ ತೆರಳುವಾಗ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

ಮ್ಯಾಕ್ಮನಸ್ ಮಹಿಳಾ ಸಿಬ್ಬಂದಿ ಜೊತೆ ಅಸಭ್ಯವಾಗಿ ನಡೆದುಕೊಂಡಿದ್ದಾರೆ. ಮಧ್ಯ ಸೇವಿಸಿ, ನೃತ್ಯ ಮಾಡಿದ್ದಾರೆ ಹಣ ನೀಡುವುದಾಗಿ ಹೇಳಿದ್ದರು ಎಂದು ದೂರಿನಲ್ಲಿ ಅವರು ತಿಳಿಸಿದ್ದಾರೆ.

ಈ ಘಟನೆ ಬಗ್ಗೆ ತನಿಖೆ ಮಾಡುವುದಾಗಿ ಜಾಗ್ವಾರ್ಸ್ ಫುಟ್‌ಬಾಲ್‌ ತಂಡ ಕೂಡ ಹೇಳಿಕೆ ಬಿಡುಗಡೆ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT