ಕೋಪಾ ಅಮೆರಿಕ ಫುಟ್‌ಬಾಲ್ ಟೂರ್ನಿ: ಮೆಸ್ಸಿ–ನೇಮರ್ ಮುಖಾಮುಖಿ

ಬ್ರೆಜಿಲಿಯಾ, ಬ್ರೆಜಿಲ್: ವಿಶ್ವದ ಪ್ರಮುಖ ಆಟಗಾರರಾದ ಲಯೊನೆಲ್ ಮೆಸ್ಸಿ ಹಾಗೂ ನೇಮರ್ ಅವರ ಮುಖಾಮುಖಿಗೆ ವೇದಿಕೆ ಸಜ್ಜಾಗಿದೆ. ಕೋಪಾ ಅಮೆರಿಕ ಫುಟ್‌ಬಾಲ್ ಟೂರ್ನಿಯಲ್ಲಿ ಅರ್ಜೆಂಟೀನಾ ಹಾಗೂ ಬ್ರೆಜಿಲ್ ತಂಡಗಳು ಫೈನಲ್ ತಲುಪಿದ್ದು, ರಿಯೊ ಡಿ ಜನೈರೊದ ಐತಿಹಾಸಿಕ ಮರಕಾನ ಕ್ರೀಡಾಂಗಣದಲ್ಲಿ ಶನಿವಾರ ಪ್ರಶಸ್ತಿಗಾಗಿ ಸೆಣಸಲಿವೆ.
ಮಂಗಳವಾರ ರಾತ್ರಿ ನಡೆದ ಸೆಮಿಫೈನಲ್ ಹಣಾಹಣಿಯಲ್ಲಿ ಮೆಸ್ಸಿ ನಾಯಕತ್ವದ ಅರ್ಜೆಂಟೀನಾ ತಂಡವು 3–2ರಿಂದ ಕೊಲಂಬಿಯಾ ತಂಡವನ್ನು ಪೆನಾಲ್ಟಿ ಶೂಟೌಟ್‌ನಲ್ಲಿ ಮಣಿಸಿತು. ನಿಗದಿತ ಅವಧಿಯಲ್ಲಿ ಉಭಯ ತಂಡಗಳು 1–1 ಸಮಬಲ ಸಾಧಿಸಿದ್ದರಿಂದ ಶೂಟೌಟ್ ಮೊರೆ ಹೋಗಲಾಗಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.