ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಶಸ್ತಿ ಪ್ರದಾನ ಸಮಾರಂಭ ರದ್ದು ಮಾಡಿದ ಎಎಫ್‌ಸಿ

Last Updated 18 ಜೂನ್ 2020, 7:22 IST
ಅಕ್ಷರ ಗಾತ್ರ

ಕ್ವಾಲಾಲಂಪುರ: ಏಷ್ಯನ್‌ ಫುಟ್‌ಬಾಲ್‌ ಕಾನ್ಫೆಡರೇಷನ್‌ (ಎಎಫ್‌ಸಿ), ಈ ವರ್ಷದ ಡಿಸೆಂಬರ್‌ನಲ್ಲಿ ಕತಾರ್‌ನಲ್ಲಿ ನಡೆಸಲು ಉದ್ದೇಶಿಸಿದ್ದ ವಾರ್ಷಿಕ ಕ್ರೀಡಾಪ್ರಶಸ್ತಿ ಪ್ರದಾನ ಸಮಾರಂಭವನ್ನು ರದ್ದು ಮಾಡಿದೆ.

ಎಎಫ್‌ಸಿ ಕಾರ್ಯಕಾರಿ ಮಡಳಿ ಸಭೆಯಲ್ಲಿ ಚರ್ಚಿಸಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.

‘ಕೋವಿಡ್‌–19 ಮಹಾಮಾರಿಯಿಂದ ವಿಶ್ವದಾದ್ಯಂತ ಲಕ್ಷಾಂತರ ಮಂದಿ ಜೀವ ಕಳೆದುಕೊಂಡಿದ್ದಾರೆ. ಪ್ರಾಣ ಕಳೆದುಕೊಂಡವರ ಕುಟುಂಬದವರು ಹಾಗೂ ಸ್ನೇಹಿತರಿಗೆ ಧೈರ್ಯ ತುಂಬಬೇಕಿರುವ ಸಮಯದಲ್ಲಿಸಮಾರಂಭ ಆಯೋಜಿಸಿ ಸಂಭ್ರಮಿಸುವುದು ಸರಿಯಲ್ಲ’ ಎಂದು ಎಎಫ್‌ಸಿ ಅಧ್ಯಕ್ಷ ಶೇಖ್‌ ಸಲ್ಮಾನ್ ‌ಬಿನ್‌ ಇಬ್ರಾಹಿಂ ಅಲ್‌ ಖಲೀಫಾ ಅವರು ಬುಧವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತಿ ವರ್ಷವೂ ಅತ್ಯುತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳನ್ನು ಗುರುತಿಸಿ ‘ಏಷ್ಯಾದ ವರ್ಷದ ಶ್ರೇಷ್ಠ ಆಟಗಾರ’ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ನೀಡುವ ಪ್ರತೀತಿಯನ್ನು ಎಎಫ್‌ಸಿ ಬೆಳೆಸಿಕೊಂಡು ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT