ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Asian Cup 2023: ಸಿರಿಯಾ ವಿರುದ್ಧವೂ ಮುಗ್ಗರಿಸಿದ ಭಾರತ, ಅಭಿಯಾನ ಅಂತ್ಯ

Published 23 ಜನವರಿ 2024, 13:51 IST
Last Updated 23 ಜನವರಿ 2024, 13:51 IST
ಅಕ್ಷರ ಗಾತ್ರ

ಕತಾರ್: ಎಎಫ್‌ಸಿ ಏಷ್ಯಾ ಕಪ್ 2023 ಫುಟ್ಬಾಲ್ ಟೂರ್ನಿಯಲ್ಲಿ ಸಿರಿಯಾ ವಿರುದ್ಧ ಇಂದು ನಡೆದ ಗುಂಪು ಹಂತದ ಕೊನೆಯ ಪಂದ್ಯದಲ್ಲೂ ಭಾರತ 0-1 ಗೋಲಿನ ಅಂತರದ ಸೋಲಿಗೆ ಶರಣಾಗಿದೆ.

ಇದರೊಂದಿಗೆ ಹ್ಯಾಟ್ರಿಕ್ ಸೋಲಿನ ಮುಖಭಂಗಕ್ಕೆ ಒಳಗಾಗಿರುವ ಭಾರತದ ಅಭಿಯಾನ ಕೊನೆಗೊಂಡಿದೆ.

ಮೊದಲೆರಡು ಪಂದ್ಯಗಳಲ್ಲಿ ಅನುಕ್ರಮವಾಗಿ ಆಸ್ಟ್ರೇಲಿಯಾ ಹಾಗೂ ಉಜ್ಬೇಕಿಸ್ತಾನ ವಿರುದ್ಧ ಭಾರತ ಪರಾಭವಗೊಂಡಿತ್ತು. ನಾಕ್‌ಔಟ್ ಪ್ರವೇಶಕ್ಕೆ ಇರುವ ಕ್ಷೀಣ ಅವಕಾಶವನ್ನು ಜೀವಂತವಾಗಿರಿಸಲು ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿತ್ತು.

ಫಿಫಾ ವಿಶ್ವ ಕ್ರಮಾಂಕದಲ್ಲಿ ತನಗಿಂತಲೂ ಉತ್ತಮ ಸ್ಥಾನ ಹೊಂದಿರುವ ಸಿರಿಯಾ ವಿರುದ್ಧ ಜಿದ್ದಾಜಿದ್ದಿನ ಹೋರಾಟ ನೀಡಿದರೂ, 76ನೇ ನಿಮಿಷದಲ್ಲಿ ಗೋಲು ಬಿಟ್ಟು ಕೊಡುವ ಮೂಲಕ ಭಾರತದ ಗೆಲುವಿನ ಆಸೆ ಕಮರಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT