ಮ್ಯಾಡ್ರಿಡ್: ಅಟ್ಲೆಟಿಕೊ ಮ್ಯಾಡ್ರಿಡ್ ಮಹಿಳಾ ಫುಟ್‌ಬಾಲ್ ಕ್ಲಬ್‌ನ ನಾಲ್ವರು ಸದಸ್ಯರಲ್ಲಿ ಕೋವಿಡ್–19 ಸೋಂಕು ಇರುವುದು ದೃಢಪಟ್ಟಿದೆ. ಇನ್ನು 10 ದಿನಗಳ ಬಳಿಕ ಅಟ್ಲೆಟಿಕೊ ತಂಡವು ಚಾಂಪಿಯನ್ಸ್ ಲೀಗ್‌ನಲ್ಲಿ ಬಾರ್ಸಿಲೋನಾ ಎಫ್‌ಸಿ ವಿರುದ್ಧದ ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ಆಡಬೇಕಿದೆ. ಹೀಗಾಗಿ ತಂಡದಲ್ಲಿನ ಈ ಬೆಳವಣಿಗೆ ಆತಂಕ ಮೂಡಿಸಿದೆ.

‘ತಂಡದ ಆಟಗಾರ್ತಿಯರು, ಕೋಚ್‌ಗಳು ಹಾಗೂ ಇತರ ಸಿಬ್ಬಂದಿಯನ್ನು ಇತ್ತೀಚೆಗೆ ಕೋವಿಡ್ ತಪಾಸಣೆಗೆ ಒಳಪಡಿಸಲಾಗಿತ್ತು. ಸದ್ಯ ಅದರ ವರದಿ ಬಂದಿದ್ದು, ನಾಲ್ವರಲ್ಲಿ ಸೋಂಕು ಕಂಡುಬಂದಿದೆ’ ಎಂದು ಅಟ್ಲೆಟಿಕೊ ಮ್ಯಾಡ್ರಿಡ್ ತಂಡ ಹೇಳಿದೆ.

ಹೋದ ವಾರವೂ ಕೆಲವರಲ್ಲಿ ಸೋಂಕು ಕಂಡುಬಂದ ಕಾರಣ ತಂಡದ ತರಬೇತಿ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಗಿತ್ತು. ಹೀಗಾಗಿ ಆಟಗಾರ್ತಿಯರು ಶಿಬಿರದಲ್ಲೇ ಬಂದಿಯಾಗಿದ್ದರು.

‘ಕೋವಿಡ್ ಸೋಂಕಿತರಲ್ಲಿ ರೋಗದ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ. ಅವರನ್ನು ಮನೆಯಲ್ಲೇ ಕ್ವಾರಂಟೈನ್ ಮಾಡಲಾಗಿದೆ. ಕೆಲವೇ ದಿನಗಳಲ್ಲಿ ಮತ್ತೊಮ್ಮೆ ಪರೀಕ್ಷೆಗೆ ಒಳಗಾಗಲಿದ್ದಾರೆ’ ಎಂದು ತಂಡದ ಆಡಳಿತ ಮಂಡಳಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.