ಭಾನುವಾರ, ಜನವರಿ 17, 2021
17 °C
ಬಿಡಿಎಫ್‌ಎ ಸೂಪರ್ ಡಿವಿಷನ್‌ ಫುಟ್‌ಬಾಲ್ ಲೀಗ್ ಚಾಂಪಿಯನ್‌ಷಿಪ್‌

ಬೆಂಗಳೂರು ಇಂಡಿಪೆಂಡೆಂಟ್ಸ್ ಜಯಭೇರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಅದ್ಭುತ ಆಟವಾಡಿದ ಬೆಂಗಳೂರು ಇಂಡಿಪೆಂಡೆಂಟ್ಸ್ ಎಫ್‌ಸಿ ತಂಡವು ಬಿಡಿಎಫ್ಎ ಸೂಪರ್ ಡಿವಿಷನ್‌ ಫುಟ್‌ಬಾಲ್‌ ಲೀಗ್ ಟೂರ್ನಿಯಲ್ಲಿ ಬುಧವಾರ 3–1ರಿಂದ ಎಡಿಇ ಎಫ್‌ಸಿ ತಂಡವನ್ನು ಮಣಿಸಿತು.

ಅಶೋಕನಗರದ ಬೆಂಗಳೂರು ಫುಟ್‌ಬಾಲ್‌ ಕ್ರೀಡಾಂಗಣದಲ್ಲಿ ನಡೆದ ಸೆಣಸಾಟದಲ್ಲಿ ವಿಜೇತ ತಂಡದ ತಿಜೊ ಜಾಬ್‌ (45ನೇ ನಿಮಿಷ), ವಿನೋದ್‌ (49ನೇ ನಿ.) ಹಾಗೂ ಮಣಿವಣ್ಣನ್‌ (54ನೇ ನಿ. ಪೆನಾಲ್ಟಿ) ಗೋಲು ದಾಖಲಿಸಿದರು. ಎಡಿಇ ಎಫ್‌ಸಿ ತಂಡದ ಪರ ಕ್ಲಿಂಟನ್‌ (9ನೇ ನಿ.) ಕಾಲ್ಚಳಕ ತೋರಿದರು.

ಮತ್ತೊಂದು ಪಂದ್ಯದಲ್ಲಿ ಬೆಂಗಳೂರು ಈಗಲ್ಸ್ ಎಫ್‌ಸಿ 2–0ಯಿಂದ ಬೆಂಗಳೂರು ಡ್ರೀಮ್ ಯುನೈಟೆಡ್ ಎಫ್‌ಸಿ ತಂಡವನ್ನು ಸೋಲಿಸಿತು. ವಿಜೇತ ತಂಡದ ಎರಡೂ ಗೋಲುಗಳನ್ನು ಗೋಪಿ (35 ಹಾಗೂ 41ನೇ ನಿ.) ದಾಖಲಿಸಿದರು. ಗೋಪಿ ಅವರು ಸಂತೋಷ್ ಟ್ರೋಫಿ ಟೂರ್ನಿಯಲ್ಲಿ ಆಡಿದ ಆಟಗಾರ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು