ಬೆಂಗಳೂರು: ಸತತ ಎರಡು ಪಂದ್ಯಗಳನ್ನು ಗೆದ್ದು ಆತ್ಮವಿಶ್ವಾಸ ವೃದ್ಧಿಸಿಕೊಂಡಿರುವ ಬೆಂಗಳೂರು ಫುಟ್ಬಾಲ್ ಕ್ಲಬ್ ತಂಡವು ಇಂಡಿಯನ್ ಸೂಪರ್ ಲೀಗ್ನ ಪಂದ್ಯದಲ್ಲಿ ಶನಿವಾರ ಕೇರಳ ಬ್ಲಾಸ್ಟರ್ಸ್ ತಂಡವನ್ನು ಎದುರಿಸಲಿದೆ.

ಸುನಿಲ್ ಚೆಟ್ರಿ ನಾಯಕತ್ವದ ಬೆಂಗಳೂರು ಎಫ್ಸಿ ತಂಡವು ಕಳೆದ ನಾಲ್ಕು ಪಂದ್ಯಗಳಲ್ಲಿ ಅಜೇಯವಾಗಿದೆ. ಕೊನೆಯ ನಾಲ್ಕು ಪಂದ್ಯಗಳ ಪೈಕಿ ಮೂರರಲ್ಲಿ ಗೆದ್ದರೆ, ಒಂದರಲ್ಲಿ ಡ್ರಾ ಸಾಧಿಸಿದೆ. ಇದೀಗ ತವರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುವ ಹಣಾಹಣಿಯಲ್ಲಿ ಪಾರಮ್ಯ ಮೆರೆಯುವ ವಿಶ್ವಾಸದಲ್ಲಿದೆ.

ಗೋವಾ ಎಫ್ಸಿ ವಿರುದ್ಧ 2-0 ಅಂತರದ ಭರ್ಜರಿ ಜಯ ಸಾಧಿಸಿರುವ ಪೆಪ್ ಮುನೋಝ್ ಮಾರ್ಗದರ್ಶನದ ಬೆಂಗಳೂರು ತಂಡ ಹ್ಯಾಟ್ರಿಕ್ ಗೆಲುವಿನ ಛದಲ್ಲಿದೆ. ಕಂಠೀರವ ಕ್ರೀಡಾಂಗಣದಲ್ಲಿ ಕೇರಳ ಬ್ಲಾಸ್ಟರ್ಸ್ ವಿರುದ್ಧ ಆಡಿದ್ದ 9 ಐಎಸ್ಎಲ್ ಪಂದ್ಯಗಳಲ್ಲಿ ಬೆಂಗಳೂರು ತಂಡವು ಏಳರಲ್ಲಿ ಗೆದ್ದು ಬೀಗಿದೆ.

ಬಿಎಫ್ಸಿ ತಂಡವು 14 ಅಂಕಗಳೊಂದಿಗೆ ಲೀಗ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಏಳು ಪಂದ್ಯಗಳ ಪೈಕಿ ನಾಲ್ಕು ಗೆಲುವು, ಎರಡು ಡ್ರಾ ಮತ್ತು ಒಂದು ಪಂದ್ಯದಲ್ಲಿ ಸೋತಿರುವ ತಂಡವು ಈ ಪಂದ್ಯದಲ್ಲಿ ಗೆದ್ದರೆ ಎರಡನೇ ಸ್ಥಾನಕ್ಕೆ ಬಡ್ತಿ ಪಡೆಯಲಿದೆ.

ಕೇರಳ ಬ್ಲಾಸ್ಟರ್ ತಂಡವು ಹಾಲಿ ಆವೃತ್ತಿಯಲ್ಲಿ ಗೆಲುವಿನ ಖಾತೆಯನ್ನು ಇನ್ನೂ ತೆರೆದಿಲ್ಲ. ಆಡಿರುವ ಏಳು ಪಂದ್ಯಗಳ ಪೈಕಿ ಒಂದರಲ್ಲಿ ಡ್ರಾ ಮತ್ತು ಉಳಿದ ಆರರಲ್ಲಿ ಸೋಲುಂಡಿದೆ. ಇದೀಗ ಮೊದಲ ಗೆಲುವಿನ ತವಕದಲ್ಲಿದೆ. ಒಂದು ಅಂಕ ಪಡೆದಿರುವ ತಂಡವು ಲೀಗ್ ಪಟ್ಟಿಯಲ್ಲಿ 13ನೇ ಸ್ಥಾನದಲ್ಲಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-51-1908266832

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.