ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಫ್‌ಸಿಯಿಂದ ಮಾನಸಿಕ ಆರೋಗ್ಯ ಅರಿವು ಕಾರ್ಯಕ್ರಮ

Last Updated 10 ಅಕ್ಟೋಬರ್ 2020, 14:56 IST
ಅಕ್ಷರ ಗಾತ್ರ

ಬೆಂಗಳೂರು: ಮಾನಸಿಕ ಆರೋಗ್ಯದ ಕುರಿತು ಅರಿವು ಹಾಗೂ ಆಟಗಾರರಿಗೆ ಆರೋಗ್ಯ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಬೆಂಗಳೂರು ಫುಟ್‌ಬಾಲ್‌ ಕ್ಲಬ್‌ ’ಕೇರ್ ಅರೌಂಡ್‌ ದ ಕಾರ್ನರ್‌‘ ಎಂಬ ಕಾರ್ಯಕ್ರಮವನ್ನು ಶನಿವಾರ ಪ್ರಕಟಿಸಿದೆ.

ಅಕ್ಟೋಬರ್‌ 10 ವಿಶ್ವ ಮಾನಸಿಕ ಆರೋಗ್ಯ ದಿನವೂ ಆಗಿದೆ.

ವೃತ್ತಿಪರ ಮಾನಸಿಕ ಆರೋಗ್ಯ ತಜ್ಞರನ್ನು ಕರೆಯಿಸಿ ಆರೋಗ್ಯದ ಕುರಿತು ಆಟಗಾರರು ಹಾಗೂ ಸಿಬ್ಬಂದಿಗೆ ಮಾರ್ಗದರ್ಶನ ಕೊಡಿಸುವುದು ಈ ಕಾರ್ಯಕ್ರಮದ ಉದ್ದೇಶಗಳಲ್ಲಿ ಒಂದು. ವಿಡಿಯೊಗಳ ಮೂಲಕವೂ ಉಪನ್ಯಾಸಗಳನ್ನು ಆಯೋಜಿಸಲಾಗುತ್ತದೆ.

‘ಮಾನಸಿಕ ಆರೋಗ್ಯವು ಅತ್ಯಂತ ಮಹ್ವದ್ದಾಗಿದೆ. ಭಾರತದ ಕ್ರೀಡಾಕ್ಷೇತ್ರದಲ್ಲಿ ಇದು ಇನ್ನೂ ಹೆಚ್ಚು ಪ್ರಾಮುಖ್ಯತೆ ಪಡೆಯಬೇಕಿದೆ. ಈ ಋತುವಿನಲ್ಲಿ ನಾವು ಮಾನಸಿಕ ಆರೋಗ್ಯ ಕುರಿತಾದ ಅಂಶವನ್ನು ಸೇರಿಸಿಕೊಳ್ಳುತ್ತಿದ್ದೇವೆ. ಮುಂಬರುವ ಆವೃತ್ತಿಗಳಿಗೂ ಇದು ಮುಂದುವರಿಯಲಿದೆ‘ ಎಂದು ಬಿಎಫ್‌ಸಿ ಕಾರ್ಯನಿರ್ವಹಣಾಧಿಕಾರಿ ಮಂದಾರ್‌ ತಮ್ಹಾನೆ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT