ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಫ್‌ಸಿಗೆ ಗೆಲುವಿನ ಛಲ

ಐಎಸ್‌ಎಲ್‌: ಎಫ್‌ಸಿ ಗೋವಾ ವಿರುದ್ಧ ಹಣಾಹಣಿ
Last Updated 25 ನವೆಂಬರ್ 2022, 12:32 IST
ಅಕ್ಷರ ಗಾತ್ರ

ಮಡಗಾಂವ್‌, ಗೋವಾ: ಸತತ ಸೋಲುಗಳಿಂದ ಕಂಗೆಟ್ಟಿರುವ ಬೆಂಗಳೂರು ಫುಟ್‌ಬಾಲ್‌ ಕ್ಲಬ್‌ (ಬಿಎಫ್‌ಸಿ), ಇಂಡಿಯನ್ ಸೂಪರ್ ಲೀಗ್‌ (ಐಎಸ್‌ಎಲ್) ಟೂರ್ನಿಯಲ್ಲಿಶನಿವಾರ ಎಫ್‌ಸಿ ಗೋವಾ ಸವಾಲು ಎದುರಿಸಲಿದೆ.

ಇಲ್ಲಿಯ ಜವಾಹರಲಾಲ್‌ ನೆಹರೂ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದ್ದು, ಬಿಎಫ್‌ಸಿ ಗೆಲುವಿನ ಲಯ ಕಂಡುಕೊಳ್ಳುವ ವಿಶ್ವಾಸದಲ್ಲಿದೆ. ಆರು ಪಂದ್ಯಗಳನ್ನು ಆಡಿರುವ ತಂಡವು ಕೇವಲ ಒಂದು ಪಂದ್ಯದಲ್ಲಿ ಗೆಲುವು ಸಾಧಿಸಿದೆ. ಒಂದು ಪಂದ್ಯ ಡ್ರಾ ಮಾಡಿಕೊಂಡಿದ್ದರೆ, ಈ ಹಿಂದಿನ ಸತತ ನಾಲ್ಕು ಹಣಾಹಣಿಗಳಲ್ಲಿ ಸೋಲು ಕಂಡಿದೆ. ಸುನಿಲ್ ಚೆಟ್ರಿ ನಾಯಕತ್ವದ ಬಿಎಫ್‌ಸಿ ಸದ್ಯ ಪಾಯಿಂಟ್ಸ್ ಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದೆ.

‘ಮುಂಬೈ ಸಿಟಿ ಎಫ್‌ಸಿ ಎದುರಿನ ಸೋಲಿನ ಬಳಿಕ ನಮ್ಮ ಆಟಗಾರರು ಉತ್ತಮವಾಗಿ ತಾಲೀಮು ನಡೆಸಿದ್ದಾರೆ. ಆದರೂ ಕ್ರೀಡಾಂಗಣದಲ್ಲಿ ಪಂದ್ಯದ ವೇಳೆ ತೋರುವ ಸಾಮರ್ಥ್ಯವೇ ಮುಖ್ಯವಾಗುತ್ತದೆ. ತಪ್ಪುಗಳನ್ನು ತಿದ್ದಿಕೊಂಡು ಮುನ್ನಡೆಯುವೆವು‘ ಎಂದು ಬಿಎಫ್‌ಸಿ ಮುಖ್ಯ ಕೋಚ್‌ ಸೈಮನ್ ಗ್ರೇಸನ್ ಹೇಳಿದ್ದಾರೆ.

ಎಫ್‌ಸಿ ಗೋವಾ ತಂಡವು 12 ಪಾಯಿಂಟ್ಸ್‌ನೊಂದಿಗೆ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಉಭಯ ತಂಡಗಳ ನಡುವೆ ಜಿದ್ದಾಜಿದ್ದಿ ಸೆಣಸಾಟ ನಡೆಯುವ ಸಾಧ್ಯತೆಯಿದೆ.

ಪ್ರಿನ್ಸ್ ಇಬಾರ ಅಲಭ್ಯ: ಮಂಡಿರಜ್ಜು ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಬಿಎಫ್‌ಸಿ ತಂಡದ ಪ್ರಿನ್ಸ್ ಇಬಾರ ಟೂರ್ನಿಯ ಉಳಿದ ಪಂದ್ಯಗಳಿಗೆ ಲಭ್ಯರಿಲ್ಲ ಎಂದುಕೋಚ್‌ ಸೈಮನ್ ಗ್ರೇಸನ್ ಹೇಳಿದ್ದಾರೆ.

ಪಂದ್ಯ ಆರಂಭ: ಸಂಜೆ 5.30

ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್ ನೆಟ್‌ವರ್ಕ್‌, ಜಿಯೊ ಟಿವಿ, ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT