ಭಾನುವಾರ, ಮೇ 22, 2022
21 °C
ಇಂಡಿಯನ್ ಸೂಪರ್ ಲೀಗ್ ಫುಟ್‌ಬಾಲ್ ಟೂರ್ನಿ: ಗೋವಾ ಎದುರಾಳಿ

ಪ್ಲೇ ಆಫ್‌ ಮೇಲೆ ನಾರ್ತ್ಈಸ್ಟ್ ಕಣ್ಣು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ವಾಸ್ಕೊ: ಹ್ಯಾಟ್ರಿಕ್ ಜಯ ದಾಖಲಿಸಿ ಆತ್ಮವಿಶ್ವಾಸ ವೃದ್ಧಿಸಿಕೊಂಡಿರುವ ನಾರ್ತ್‌ಈಸ್ಟ್ ಯುನೈಟೆಡ್ ಎಫ್‌ಸಿ ತಂಡವು ಪ್ಲೇ ಆಫ್ ಪ್ರವೇಶದ ಕನಸು ಕಾಣುತ್ತಿದೆ. ಇಂಡಿಯನ್ ಸೂಪರ್ ಲೀಗ್ (ಐಎಸ್‌ಎಲ್‌) ಫುಟ್‌ಬಾಲ್‌ ಟೂರ್ನಿಯಲ್ಲಿ ಆ ತಂಡವು ಗುರುವಾರ ನಡೆಯಲಿರುವ ಪಂದ್ಯದಲ್ಲಿ ಆತಿಥೇಯ ಎಫ್‌ಸಿ ಗೋವಾಕ್ಕೆ ಮುಖಾಮುಖಿಯಾಗಲಿದೆ.

ಹಂಗಾಮಿ ಕೋಚ್‌ ಖಾಲಿದ್ ಜಮೀಲ್‌ ಮಾರ್ಗದರ್ಶನದಲ್ಲಿ ಸತತ ಮೂರು ಗೆಲುವು ಸಂಪಾದಿಸಿರುವ ನಾರ್ತ್‌ಈಸ್ಟ್, ತಿಲಕ್‌ ಕ್ರೀಡಾಂಗಣದಲ್ಲಿ ನಡೆಯುವ ಹಣಾಹಣಿಯಲ್ಲಿಯೂ ಜಯದ ವಿಶ್ವಾಸದಲ್ಲಿದೆ.

ಟೂರ್ನಿಯಲ್ಲಿ ಉಭಯ ತಂಡಗಳು ತಲಾ 14 ಪಂದ್ಯಗಳನ್ನು ಆಡಿದ್ದ 21 ಪಾಯಿಂಟ್ಸ್ ಕಲೆಹಾಕಿವೆ. ನಾರ್ತ್‌ಈಸ್ಟ್ ತಂಡವು ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದರೆ, ಗೋವಾ ನಾಲ್ಕನೇ ಸ್ಥಾನದಲ್ಲಿದೆ.

ಕಳೆದ ನಾಲ್ಕು ಪಂದ್ಯಗಳಲ್ಲಿ ನಾರ್ತ್‌ಈಸ್ಟ್ ಸೋಲು ಅನುಭವಿಸಿಲ್ಲ. ಗೋವಾ ಕೂಡ ಕಳೆದ ಏಳು ಪಂದ್ಯಗಳಲ್ಲಿ ಅಜೇಯವಾಗುಳಿದಿದೆ. ಹೀಗಾಗಿ ಈ ಪಂದ್ಯದಲ್ಲಿ ಜಿದ್ದಾಜಿದ್ದಿನ ಪೈಪೋಟಿ ನಿರೀಕ್ಷಿಸಬಹುದು.

ಉಭಯ ತಂಡಗಳ ನಡುವಣ ಈ ಹಿಂದಿನ ಮುಖಾಮುಖಿ 1–1ರ ಡ್ರಾನಲ್ಲಿ ಕೊನೆಗೊಂಡಿತ್ತು.

ಪಂದ್ಯ ಆರಂಭ: ಸಂಜೆ 7.30

ಸ್ಥಳ: ತಿಲಕ್ ಕ್ರೀಡಾಂಗಣ, ವಾಸ್ಕೊ

ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್ ನೆಟ್‌ವರ್ಕ್‌

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು