ಶುಕ್ರವಾರ, 1 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫುಟ್‌ಬಾಲ್‌ ವಿಶ್ವಕಪ್‌: ಅರ್ಜೆಂಟೀನಾ –ಬ್ರೆಜಿಲ್ ಪಂದ್ಯದ ವೇಳೆ ಗುಂಪು ಘರ್ಷಣೆ

Published 22 ನವೆಂಬರ್ 2023, 5:15 IST
Last Updated 22 ನವೆಂಬರ್ 2023, 5:15 IST
ಅಕ್ಷರ ಗಾತ್ರ

ಮಾಂಟೆವಿಡಿಯೊ: ಫುಟ್‌ಬಾಲ್‌ ವಿಶ್ವಕಪ್‌ ಕ್ವಾಲಿಫೈಯರ್‌ನಲ್ಲಿ ಅರ್ಜೆಂಟೀನಾ –ಬ್ರೆಜಿಲ್ ಪಂದ್ಯದ ವೇಳೆ ಅಭಿಮಾನಿಗಳು ಮತ್ತು ಪೊಲೀಸರ ನಡುವೆ ಘರ್ಷಣೆ ಉಂಟಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಮರಕಾನಾ ಕ್ರೀಡಾಂಗಣದಲ್ಲಿ ಮಂಗಳವಾರ ಅರ್ಜೆಂಟೀನಾ ಮತ್ತು ಬ್ರೆಜಿಲ್ ವಿರುದ್ಧ ಪಂದ್ಯದ ವೇಳೆ ಈ ಘಟನೆ ನಡೆದಿದೆ. ಘರ್ಷಣೆ ಹಿನ್ನೆಲೆಯಲ್ಲಿ ಪಂದ್ಯವನ್ನು ಅರ್ಧ ಗಂಟೆ ತಡವಾಗಿ ಆರಂಭಿಸಲಾಗಿದೆ.

ಬ್ರೆಜಿಲ್ ಮತ್ತು ಅರ್ಜೆಂಟೀನಾದ ಅಭಿಮಾನಿಗಳು ರಾಷ್ಟ್ರಗೀತೆಗಳನ್ನು ನುಡಿಸುವ ಸಮಯದಲ್ಲಿ ಜಗಳವಾಡಲು ಮುಂದಾಗಿದ್ದು, ಈ ವೇಳೆ ಪರಿಸ್ಥಿತಿಯನ್ನು ನಿಯಂತ್ರಿಸುವ ಉದ್ದೇಶದಿಂದ ಬ್ರೆಜಿಲ್ ಪೊಲೀಸರು ಲಾಠಿ ಚಾರ್ಚ್ ಮಾಡಿದ್ದಾರೆ. ಇದರಿಂದ ಉದ್ರಿಕ್ತಗೊಂಡ ಅಭಿಮಾನಿಗಳು ಅಧಿಕಾರಿಗಳ ಮೇಲೆ ಆಸನಗಳನ್ನು ಕಿತ್ತು ಎಸೆಯುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

ಘರ್ಷಣೆಯಿಂದಾಗಿ ಗ್ಯಾಲರಿಯಲ್ಲಿದ್ದ ಅಭಿಮಾನಿಗಳು ಭಯಭೀತರಾಗಿ ಆಟದ ಮೈದಾನಕ್ಕೆ ನುಗ್ಗಿದ್ದಾರೆ. ಈ ವೇಳೆ ವ್ಯಕ್ತಿಯೊಬ್ಬರು ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಲಯೊನೆಲ್‌ ಮೆಸ್ಸಿ ನಾಯಕತ್ವದ ಅರ್ಜೆಂಟೀನಾ ತಂಡದ ಆಟಗಾರರು ಮೈದಾನ ಬಿಟ್ಟು ಡ್ರೆಸ್ಸಿಂಗ್ ರೂಮ್‌ಗೆ ವಾಪಸ್‌ ಆಗಿದ್ದರು. ಪರಿಸ್ಥಿತಿ ಸುಧಾರಿಸಿದ ಬಳಿಕ ಮತ್ತೆ ಮೈದಾನಕ್ಕೆ ವಾಪಸ್ ಆಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT