ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಎಸ್‌ಎಲ್‌: ಡ್ರಾ ಮಾಡಿಕೊಂಡ ಡೈನಾಮೊಸ್‌

Last Updated 20 ಅಕ್ಟೋಬರ್ 2018, 20:08 IST
ಅಕ್ಷರ ಗಾತ್ರ

ಕೊಚ್ಚಿ: ರೋಚಕ ಘಟ್ಟದಲ್ಲಿ ಗೋಲು ಗಳಿಸಿದ ಆ್ಯಂಡ್ರಿಜಾ ಕಲುಡರೊವಿಚ್‌, ಇಂಡಿಯನ್‌ ಸೂಪರ್‌ ಲೀಗ್‌ (ಐಎಸ್‌ಎಲ್‌) ಫುಟ್‌ಬಾಲ್‌ ಟೂರ್ನಿಯ ಪಂದ್ಯದಲ್ಲಿ ಡೆಲ್ಲಿ ಡೈನಾಮೊಸ್‌ ತಂಡವನ್ನು ಸೋಲಿನಿಂದ ಪಾರು ಮಾಡಿದರು.

ಜವಾಹರಲಾಲ್‌ ನೆಹರೂ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಹೋರಾಟದಲ್ಲಿ ಡೈನಾಮೊಸ್‌ 1–1 ಗೋಲುಗಳಿಂದ ಆತಿಥೇಯ ಕೇರಳ ಬ್ಲಾಸ್ಟರ್ಸ್‌ ಎದುರು ಡ್ರಾ ಮಾಡಿಕೊಂಡಿತು.

ಆರಂಭದಿಂದಲೇ ಉಭಯ ತಂಡಗಳು ಜಿದ್ದಾಜಿದ್ದಿನ ಪೈಪೋಟಿ ನಡೆಸಿದವು. 48ನೇ ನಿಮಿಷದಲ್ಲಿ ಸಿ.ಕೆ.ವಿನೀತ್‌, ಬ್ಲಾಸ್ಟರ್ಸ್‌ ಖಾತೆ ತೆರೆದರು. 83ನೇ ನಿಮಿಷದವರೆಗೂ ಆತಿಥೇಯರು ಪಂದ್ಯದ ಮೇಲೆ ಹಿಡಿತ ಸಾಧಿಸಿದ್ದರು. ಆದರೆ 84ನೇ ನಿಮಿಷದಲ್ಲಿ ಮೋಡಿ ಮಾಡಿದ ಆ್ಯಂಡ್ರಿಜಾ ಪಂದ್ಯದ ಚಿತ್ರಣ ಬದಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT