ಶನಿವಾರ, 7 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವೈದ್ಯೆ ಅತ್ಯಾಚಾರ, ಕೊಲೆ ಖಂಡಿಸಿ ಪ್ರತಿಭಟನೆ: ಫುಟ್‌ಬಾಲ್ ಪಂದ್ಯ ರದ್ದು

Published 17 ಆಗಸ್ಟ್ 2024, 13:58 IST
Last Updated 17 ಆಗಸ್ಟ್ 2024, 13:58 IST
ಅಕ್ಷರ ಗಾತ್ರ

ಕೋಲ್ಕತ್ತ: ವೈದ್ಯೆಯ ಮೇಲೆ ಅತ್ಯಾಚಾರ– ಕೊಲೆ ಪ್ರಕರಣದ ನಂತರ ನಗರದಲ್ಲಿ ಪ್ರತಿಭಟನೆ ನಡೆಯುತ್ತಿರುವ ಕಾರಣ, ಮೋಹನ್ ಬಾಗನ್ ಮತ್ತು ಈಸ್ಟ್‌ ಬೆಂಗಾಲ್ ನಡುವಣ ಸಾಲ್ಟ್‌ಲೇಕ್‌ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಬೇಕಾಗಿದ್ದ ಡುರಾಂಡ್‌ ಕಪ್ ಫುಟ್‌ಬಾಲ್‌ ಡರ್ಬಿ ಪಂದ್ಯವನ್ನು ರದ್ದುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕೋಲ್ಕತ್ತ ಪೊಲೀಸ್ ಅಧಿಕಾರಿಗಳು ಮತ್ತು ಆಯೋಜಕರ ಮಧ್ಯೆ ಸಭೆಯ ನಂತರ ಈ ನಿರ್ಧಾರಕ್ಕೆ ಬರಲಾಯಿತು.

ಎರಡೂ ತಂಡಗಳಿಗೆ ತಲಾ ಒಂದು ಪಾಯಿಂಟ್‌ ನೀಡಲಾಗಿದೆ. ಅಭಿಮಾನಿಗಳಿಗೆ ಟಿಕೆಟ್‌ನ ಪೂರ್ಣ ಮೊತ್ತವನ್ನು ಹಿಂತಿರುಗಿಸಲಾಗುವುದು ಎಂದು ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದರು.

‘ಕೋಲ್ಕತ್ತದಲ್ಲಿ ನಡೆಯಬೇಕಿರುವ ಇತರ ಎಲ್ಲ ಪಂದ್ಯಗಳನ್ನು ಜಮ್‌ಷೆಡ್‌ಪುರಕ್ಕೆ ಸ್ಥಳಾಂತರಿಸಲಾಗುವುದು. ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಬೀಳಬೇಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT