ಮಂಗಳವಾರ, ಮಾರ್ಚ್ 28, 2023
33 °C

ಫುಟ್‌ಬಾಲ್‌ ವಿಶ್ವಕಪ್‌ ಗೆದ್ದ ಅರ್ಜೆಂಟೀನಾ ತಂಡವನ್ನು ಅಭಿನಂದಿಸಿದ ಪ್ರಧಾನಿ ಮೋದಿ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಫುಟ್‌ಬಾಲ್‌ ವಿಶ್ವಕಪ್‌ ಗೆದ್ದ ಅರ್ಜೆಂಟೀನಾ ತಂಡವನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಭಾನುವಾರ ರಾತ್ರಿ ನಡೆದ ಫೈನಲ್ ಪಂದ್ಯವು ಅತ್ಯಂತ ರೋಮಾಂಚಕ ಫುಟ್ಬಾಲ್ ಪಂದ್ಯಗಳಲ್ಲಿ ಒಂದಾಗಿದೆ ಎಂದು ಅವರು ಬಣ್ಣಿಸಿದ್ದಾರೆ.

ಅರ್ಜೆಂಟೀನಾ ಮತ್ತು ಮೆಸ್ಸಿಯ ಲಕ್ಷಾಂತರ ಭಾರತೀಯ ಅಭಿಮಾನಿಗಳು ರೋಚಕ ಗೆಲುವನ್ನು ಸಂಭ್ರಮಿಸಲಿದ್ದಾರೆ ಎಂದು ಅವರು ಹೇಳಿದರು.

‘ಅತ್ಯಂತ ರೋಮಾಂಚಕ ಫುಟ್ಬಾಲ್ ಪಂದ್ಯಗಳಲ್ಲಿ ಒಂದಾಗಿ ಇದು ನೆನಪಿನಲ್ಲಿ ಉಳಿಯುತ್ತದೆ. ಫಿಫಾ ವಿಶ್ವಕಪ್ ಚಾಂಪಿಯನ್ ಆಗಿದ್ದಕ್ಕಾಗಿ ಅರ್ಜೆಂಟೀನಾಗೆ ಅಭಿನಂದನೆಗಳು. ಕೂಟದ ಉದ್ದಕ್ಕೂ ಅವರು ಅದ್ಭುತವಾಗಿ ಆಡಿದ್ದಾರೆ. ಅರ್ಜೆಂಟೀನಾ ಮತ್ತು ಮೆಸ್ಸಿಯ ಲಕ್ಷಾಂತರ ಭಾರತೀಯ ಅಭಿಮಾನಿಗಳು ಈ ಭವ್ಯ ಗೆಲುವಿನಲ್ಲಿ ಸಂಭ್ರಮಿಸಲಿದ್ದಾರೆ’ ಎಂದು ಅವರು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.

ಫ್ರಾನ್ಸ್‌ ತಂಡವನ್ನೂ ಮೋದಿ ಇದೇ ವೇಳೆ ಅಭಿನಂದಿಸಿದ್ದಾರೆ.

‘ಫಿಫಾ ವಿಶ್ವಕಪ್‌ನಲ್ಲಿ ಉತ್ಸಾಹಭರಿತ ಪ್ರದರ್ಶನ ನೀಡಿದ್ದಕಾಗಿ ಫ್ರಾನ್ಸ್‌ಗೆ ಅಭಿನಂದನೆಗಳು. ಫೈನಲ್‌ ತಲುಪುವ ಹಾದಿಯಲ್ಲಿ ಅವರು ಕೌಶಲ ಪ್ರದರ್ಶಿಸಿದ್ದಾರೆ. ಕ್ರೀಡಾ ಮನೋಭಾವದಿಂದ ಫುಟ್‌ಬಾಲ್ ಅಭಿಮಾನಿಗಳನ್ನು ಸಂತೋಷಪಡಿಸಿದ್ದಾರೆ’ ಎಂದು ಹೇಳಿದ್ದಾರೆ.

ಫಿಫಾ ಫೈನಲ್‌ನಲ್ಲಿ ಫ್ರಾನ್ಸ್ ತಂಡವನ್ನು ಪೆನಾಲ್ಟಿ ಶೂಟೌಟ್‌ನಲ್ಲಿ 4-2 ಗೋಲುಗಳಿಂದ ಸೋಲಿಸಿದ ಅರ್ಜೆಂಟೀನಾ ವಿಶ್ವಕಪ್ ಗೆದ್ದುಕೊಂಡಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು