ಶುಕ್ರವಾರ, ಜನವರಿ 27, 2023
25 °C

FIFA World Cup: ಆಸ್ಟ್ರೇಲಿಯಾ ವಿರುದ್ಧ ಜಯ, ಕ್ವಾರ್ಟರ್ ಫೈನಲ್‌ಗೆ ಮೆಸ್ಸಿ ಬಳಗ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ದೋಹಾ: ಸ್ಟಾರ್ ಆಟಗಾರ ಲಯೊನೆಲ್‌ ಮೆಸ್ಸಿ ಅವರು ತಮ್ಮ ವೃತ್ತಿಜೀವನದ 1000ನೇ ಪಂದ್ಯದಲ್ಲಿ ಎಲ್ಲರನ್ನೂ ಮಂತ್ರಮುಗ್ಧಗೊಳಿಸಿದರು.

ಫಿಫಾ ವಿಶ್ವಕಪ್‌ ಟೂರ್ನಿಯ ಪ್ರಿ ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ಭಾನುವಾರ ಅರ್ಜೆಂಟೀನಾ  2-1 ಗೋಲುಗಳಿಂದ ಆಸ್ಟ್ರೇಲಿಯಾ ತಂಡವನ್ನು ಮಣಿಸಿತು. ಇದರೊಂದಿಗೆ ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇರಿಸಿತು.

ಅಹಮದ್‌ ಬಿನ್‌ ಅಲಿ ಕ್ರೀಡಾಂಗಣದಲ್ಲಿ ಲಯೊನೆಲ್‌ ಮೆಸ್ಸಿ ಮೋಡಿ ಮಾಡಿದರು. 35ನೇ ನಿಮಿಷದಲ್ಲಿ ಮೆಸ್ಸಿ ಮನಮೋಹಕ ಗೋಲು ಬಾರಿಸಿ ಗಮನ ಸೆಳೆದರು. ಇತ್ತ 57ನೇ ನಿಮಿಷದಲ್ಲಿ ಜೂಲಿಯನ್‌ ಅಲ್ವಾರೆಜ್‌ ಮತ್ತೊಂದು ಗೋಲು ತಂದುಕೊಟ್ಟರು. 

ಈ ಮೂಲಕ ಮೆಸ್ಸಿ ಈ ಟೂರ್ನಿಯಲ್ಲಿ ಗಳಿಸಿದ ಮೂರು ಗೋಲುಗಳು ಸೇರಿದಂತೆ ವಿಶ್ವಕಪ್‌ನಲ್ಲಿ ಒಟ್ಟು ಒಂಬತ್ತು ಸಲ ಚೆಂಡನ್ನು ಗುರಿ ಸೇರಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು