ಸೋಮವಾರ, ಫೆಬ್ರವರಿ 24, 2020
19 °C

ಫುಟ್‌ಬಾಲ್‌: ಬಿಎಫ್‌ಸಿ ಜಯಭೇರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅದ್ವೈತ್‌ ಶಿಂಧೆ ಗಳಿಸಿದ ‘ಹ್ಯಾಟ್ರಿಕ್‌’ ಗೋಲುಗಳ ನೆರವಿನಿಂದ ಬೆಂಗಳೂರು ಫುಟ್‌ಬಾಲ್‌ ಕ್ಲಬ್‌ (ಬಿಎಫ್‌ಸಿ) ತಂಡ ಬಿಡಿಎಫ್‌ಎ ಆಶ್ರಯದ ಸೂಪರ್‌ ಡಿವಿಷನ್‌ ಲೀಗ್‌ ಚಾಂಪಿಯನ್‌ಷಿಪ್‌ನ ಪಂದ್ಯದಲ್ಲಿ ಜಯಭೇರಿ ಮೊಳಗಿಸಿದೆ.

ಅಶೋಕನಗರದಲ್ಲಿರುವ ಬೆಂಗಳೂರು ಫುಟ್‌ಬಾಲ್‌ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಹಣಾಹಣಿಯಲ್ಲಿ ಬಿಎಫ್‌ಸಿ 8–0 ಗೋಲುಗಳಿಂದ ಬೆಂಗಳೂರು ಡ್ರೀಮ್‌ ಯುನೈಟೆಡ್‌ ಎಫ್‌ಸಿ ಎದುರು ಗೆದ್ದಿತು.

ಅದ್ವೈತ್‌ ಅವರು 30, 39 ಮತ್ತು 90ನೇ ನಿಮಿಷಗಳಲ್ಲಿ ಕಾಲ್ಚಳಕ ತೋರಿ ‘ಹ್ಯಾಟ್ರಿಕ್’ ಸಾಧನೆ ಮಾಡಿದರು. ಬಿಸ್ವಾ ದಾರ್ಜಿ (55), ಲಯನ್‌ ಅಗಸ್ಟಿನ್‌ (62), ಮೊಹಮ್ಮದ್‌ ರಫಿ (64), ಫ್ರೆಡಿ (77) ಮತ್ತು ನಮಗ್ಯಲ್‌ ಭುಟಿಯಾ (90+2) ಅವರು ತಲಾ ಒಂದು ಗೋಲು ಗಳಿಸಿದರು.

‘ಎ’ ಡಿವಿಷನ್‌ ಲೀಗ್‌ ಪಂದ್ಯದಲ್ಲಿ ಪೋಸ್ಟಲ್‌ ಎಫ್‌ಸಿ 2–1 ಗೋಲುಗಳಿಂದ ಬಿಟಿಎಂ ಎಫ್‌ಸಿ ಎದುರು ಜಯಿಸಿತು.

ವಿಜಯೀ ತಂಡದ ಸ್ಟೀವನ್‌ ಮತ್ತು ಜನಾರ್ಧನ್‌ ಅವರು ಕ್ರಮವಾಗಿ 45 ಮತ್ತು 70ನೇ ನಿಮಿಷಗಳಲ್ಲಿ ಗೋಲು ಹೊಡೆದರು.

ಇನ್ನೊಂದು ಹಣಾಹಣಿಯಲ್ಲಿ ಯಂಗ್‌ ಚಾಲೆಂಜರ್ಸ್‌ ಎಫ್‌ಸಿ 2–1 ಗೋಲುಗಳಿಂದ ಬಿಯುಎಫ್‌ಸಿ ತಂಡವನ್ನು ಪರಾಭವಗೊಳಿಸಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು