ಗುರುವಾರ , ಮೇ 26, 2022
24 °C

ಫುಟ್‌ಬಾಲ್‌ ಆಟಗಾರ ಸುಭಾಶ್‌ ಭೌಮಿಕ್‌ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲ್ಕತ್ತ: ಭಾರತದ ಮಾಜಿ ಫುಟ್‌ಬಾಲ್‌ ಆಟಗಾರ ಸುಭಾಶ್‌ ಭೌಮಿಕ್‌ ಅವರು ನಿಧನರಾಗಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು.

ಮಧುಮೇಹ ಹಾಗೂ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶನಿವಾರ ಬೆಳಗ್ಗೆ ಸುಭಾಶ್‌ ಭೌಮಿಕ್‌ ನಿಧನರಾದರು ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.

ಸುಭಾಶ್‌ ನಿಧನಕ್ಕೆ ಕ್ರೀಡಾ ಕ್ಷೇತ್ರದ ದಿಗ್ಗಜರು, ಫುಟ್‌ಬಾಲ್‌ ಅಭಿಮಾನಿಗಳು ಸಾಮಾಜಿಕ ಮಾಧ್ಯಮಗಳ ಮೂಲಕ ಸಂತಾಪ ಸೂಚಿಸಿದ್ದಾರೆ.

ಏಷ್ಯಾ ಕಪ್‌ ಸೇರಿಂದತೆ ವಿವಿಧ ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದರು. ಫುಟ್‌ಬಾಲ್‌ನಿಂದ ನಿವೃತ್ತಿ ಪಡೆದು ಕೆಲವು ವರ್ಷಗಳ ಕಾಲ ತರಬೇತುದಾರರಾಗಿ ಕೆಲಸ ಮಾಡಿದ್ದರು.

ಈಸ್ಟ್‌ ಬೆಂಗಾಲ್ ಹಾಗೂ ಮೋಹನ್‌ ಬಗಾನ್‌ ತಂಡಗಳಿಗೂ ಅವರು ಫುಟ್‌ಬಾಲ್‌ ಆಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು