ಬುಧವಾರ, ಮಾರ್ಚ್ 29, 2023
30 °C

ಫುಟ್‌ಬಾಲ್‌: ಕರ್ನಾಟಕಕ್ಕೆ ಗೆಲುವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕ ತಂಡದವರು ಮಧ್ಯಪ್ರದೇಶದಲ್ಲಿ ನಡೆಯುತ್ತಿರುವ ಖೇಲೊ ಇಂಡಿಯಾ ಯೂತ್‌ ಗೇಮ್ಸ್‌ ಫುಟ್‌ಬಾಲ್‌ ಟೂರ್ನಿಯಲ್ಲಿ ಗೆಲುವಿನ ಓಟ ಮುಂದುವರಿಸಿದ್ದಾರೆ.

ಶನಿವಾರ ನಡೆದ ಪಂದ್ಯದಲ್ಲಿ ಕರ್ನಾಟಕ 3–1 ಗೋಲುಗಳಿಂದ ಒಡಿಶಾ ತಂಡವನ್ನು ಮಣಿಸಿತು.

ಇಶಾನ್‌ ರಘುನಂದನ್‌ (21ನೇ ನಿ.), ಎಸ್‌.ಪಿ.ಅಭಿಷೇಕ್‌ (57ನೇ ನಿ.) ಮತ್ತು ಆದಿತ್ಯ ಕೆ. (90ನೇ ನಿ.) ಅವರು ರಾಜ್ಯ ತಂಡದ ಪರ ಗೋಲು ಗಳಿಸಿದರು. ಒಡಿಶಾ ತಂಡದ ಏಕೈಕ ಗೋಲನ್ನು ವೊಂಗ್ಡೆನ್‌ ಲಾಮಾ ಅವರು 61ನೇ ನಿಮಿಷದಲ್ಲಿ ಗಳಿಸಿದರು.

ಸೋಮವಾರ ನಡೆಯಲಿರುವ ತನ್ನ ಮುಂದಿನ ಪಂದ್ಯದಲ್ಲಿ ಕರ್ನಾಟಕ ತಂಡ ಮೇಘಾಲಯದ ಸವಾಲು ಎದುರಿಸಲಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು