ಬುಧವಾರ, ಜೂನ್ 3, 2020
27 °C

ಎಐಎಫ್‌ಎಫ್‌ ಅಧ್ಯಕ್ಷ ಸ್ಥಾನದ ಮೇಲೆ ಭುಟಿಯಾ ಕಣ್ಣು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಅಖಿಲ ಭಾರತ ಫುಟ್‌ಬಾಲ್ ಫೆಡರೇಷನ್‌ನ ಅಧ್ಯಕ್ಷ ಸ್ಥಾನಕ್ಕಾಗಿ ನಡೆಯಲಿರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಯಕೆ ಇದೆ ಎಂದು ಭಾರತ ಫುಟ್‌ಬಾಲ್ ತಂಡದ ಮಾಜಿ ನಾಯಕ ಬೈಚುಂಗ್ ಭುಟಿಯಾ ಹೇಳಿದ್ದಾರೆ. 

ಫೇಸ್‌ಬುಕ್‌ನಲ್ಲಿ ನಡೆದ ಸಂವಾದದಲ್ಲಿ ಈ ವಿಷಯವನ್ನು ಬರೆದಿರುವ ಭುಟಿಯಾ ಸದ್ಯ ಬೈಚುಂಗ್‌ ಭುಟಿಯಾ ಫುಟ್‌ಬಾಲ್ ಶಾಲೆ ಯುನೈಟೆಡ್ ಸಿಕ್ಕಿಂ ಕ್ಲಬ್‌ನಲ್ಲಿ ಎಳೆಯ ಮಕ್ಕಳ ಪ್ರತಿಭೆಗೆ ಸಾಣೆ ಹಿಡಿಯುವ ಕಾರ್ಯದಲ್ಲಿ ತೊಡಗಿದ್ದೇನೆ. ಆದರೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದರು.

2008ರಲ್ಲಿ ಪ್ರಿಯರಂಜನ್ ದಾಸ್ ಮುನ್ಶಿ ಅವರಿಗೆ ಅನಾರೋಗ್ಯ ಕಾಡಿದಾಗ ಅಧ್ಯಕ್ಷ ಸ್ಥಾನವನ್ನು ನಿಭಾಯಿಸಿದ ಪ್ರಫುಲ್ ಪಟೇಲ್ ನಂತರ 2012 ಮತ್ತು 2016ರಲ್ಲಿ ಪುನರಾಯ್ಕೆ ಆಗಿದ್ದರು. ಈ ವರ್ಷ ನಡೆಯಲಿರುವ ಚುನಾವಣೆಯಲ್ಲಿ ಮರು ಆಯ್ಕೆ ಬಯಸಿ ಅವರು ಸ್ಪರ್ಧಿಸುವುದು ಖಚಿತ. 

ಒಂದು ದಶಕಕ್ಕೂ ಹೆಚ್ಚು ಕಾಲ ಭಾರತ ತಂಡದಲ್ಲಿ ಮಿಂಚಿದ್ದ ಭುಟಿಯಾ 2011ರಲ್ಲಿ ನಿವೃತ್ತರಾಗಿದ್ದರು. 43 ವರ್ಷದ ಅವರು ಭಾರತದ ಪರವಾಗಿ 100 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ ಮೊದಲ ಆಟಗಾರ ಎನಿಸಿದ್ದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು