ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫುಟ್‌ಬಾಲ್ ಆಟಗಾರ ಕ್ರಿಸ್ಟಿ ನಿಧನ

Last Updated 31 ಅಕ್ಟೋಬರ್ 2019, 14:24 IST
ಅಕ್ಷರ ಗಾತ್ರ

ಬೆಂಗಳೂರು: ಅಂತರರಾಷ್ಟ್ರೀಯ ಫುಟ್‌ಬಾಲ್ ಆಟಗಾರರಾಗಿದ್ದ ಜೆ.ಜೋಸೆಫ್ ಕ್ರಿಸ್ಟಿ (90) ಬುಧವಾರ ರಾತ್ರಿ ನಗರದ ಫ್ರೇಜರ್ ಟೌನ್‌ನ ವಿಲ್ಲನ್ ಗಾರ್ಡನ್‌ನಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು. ಅವರಿಗೆ ಇಬ್ಬರು ಪುತ್ರರು ಮತ್ತು ಪುತ್ರಿ ಇದ್ದಾರೆ.

ಮಿಡ್‌ಫೀಲ್ಡರ್ ಆಗಿದ್ದ ಕ್ರಿಸ್ಟಿ 1960ರಲ್ಲಿ ರಷ್ಯಾ ಪ್ರವಾಸ ಕೈಗೊಂಡ ಭಾರತ ತಂಡದಲ್ಲಿ ಆಡಿದ್ದರು. ಅದೇ ವರ್ಷ ಸಂತೋಷ್ ಟ್ರೋಫಿ ಟೂರ್ನಿಯಲ್ಲಿ ‘ಮೈಸೂರು ರಾಜ್ಯ’ ತಂಡದಲ್ಲಿದ್ದರು.

ಪೊಲೀಸ್ ಇಲಾಖೆ ಸೇರಿದ ನಂತರ ಸುಲಿವಾನ್ ಪೊಲೀಸ್ ತಂಡವನ್ನು ಪ್ರತಿನಿಧಿಸಿದ್ದರು. 1979ರಲ್ಲಿ ರಾಷ್ಟ್ರೀಯ ಕ್ರೀಡಾ ಸಂಸ್ಥೆಯಲ್ಲಿ ಕೋಚಿಂಗ್ ತರಬೇತಿ ಪೂರ್ಣಗೊಳಿಸಿದ್ದರು. ‌ಗುರುವಾರ ಸಂಜೆ ಅಂತ್ಯ ಸಂಸ್ಕಾರ ನಡೆಯಿತು ಎಂದು ರಾಜ್ಯ ಫುಟ್‌ಬಾಲ್ ಸಂಸ್ಥೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT