ನವದೆಹಲಿ: ಅಖಿಲ ಭಾರತ ಫುಟ್ಬಾಲ್ ಫೆಡರೇಷನ್ (ಎಐಎಫ್ಎಫ್) ಮಾಜಿ ಪ್ರಧಾನ ಕಾರ್ಯದರ್ಶಿ ಕುಶಾಲ್ ದಾಸ್ (65) ಅವರು ಶುಕ್ರವಾರ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

12 ವರ್ಷ ಎಐಎಫ್ಎಫ್ ಪ್ರಧಾನ ಕಾರ್ಯದರ್ಶಿ ಹುದ್ದೆಯಲ್ಲಿದ್ದ ದಾಸ್ ಅವರು 2022ರಲ್ಲಿ ಅನಾರೋಗ್ಯದ ಕಾರಣ ನೀಡಿ ರಾಜೀನಾಮೆ ನೀಡಿದ್ದರು. ಅವರು ಭಾರತದಲ್ಲಿ 2017ರ ಫಿಫಾ 17 ವರ್ಷದೊಳಗಿನವರ ವಿಶ್ವಕಪ್ ಟೂರ್ನಿ ಆಯೋಜಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು.

2010ರಲ್ಲಿ ಫುಟ್ಬಾಲ್ ಆಡಳಿತವನ್ನು ಪ್ರವೇಶಿಸುವ ಮೊದಲು ಅವರು ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಮತ್ತು ಅಂತರರಾಷ್ಟ್ರೀಯ ಮ್ಯಾನೇಜ್ಮೆಂಟ್ ಗ್ರೂಪ್ನ (ಐಎಂಜಿ) ಭಾರತದ ಮುಖ್ಯ ಹಣಕಾಸು ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.

ದಾಸ್ ಅವರ ಅಧಿಕಾರಾವಧಿಯಲ್ಲಿ ಭಾರತವು ಮೊದಲ ಬಾರಿಗೆ ಪ್ರತಿಷ್ಠಿತ ಫಿಫಾ 17 ವರ್ಷದೊಳಗಿನವರ ವಿಶ್ವಕಪ್ಗೆ ಆತಿಥ್ಯ ವಹಿಸಿದ್ದು ಮಾತ್ರವಲ್ಲದೆ, ರಾಷ್ಟ್ರೀಯ ತಂಡವು ಮೂರು ಎಎಫ್ಸಿ ಏಷ್ಯನ್ ಕಪ್ ಟೂರ್ನಿಗಳಿಗೆ ಅರ್ಹತೆ ಪಡೆಯಿತು. ಆ ಸಮಯದಲ್ಲಿ ಭಾರತ ಫುಟ್ಬಾಲ್ ಸಾಧನೆಯನ್ನು ಅವರು ‘ಗೇಮ್ ಚೇಂಜರ್’ ಎಂದು ಬಣ್ಣಿಸಿದ್ದರು.

2010ರಲ್ಲಿ ಫುಟ್ಬಾಲ್ ಸ್ಪೋರ್ಟ್ಸ್ ಡೆವಲಪ್ಮೆಂಟ್ ಲಿಮಿಟೆಡ್ (ಎಫ್ಎಸ್ಡಿಎಲ್) ಅನ್ನು ಎಐಎಫ್ಎಫ್ನ ಮಾರ್ಕೆಟಿಂಗ್ ಪಾಲುದಾರರನ್ನಾಗಿ ತರುವಲ್ಲಿ ದಾಸ್ ಪ್ರಮುಖ ಪಾತ್ರ ವಹಿಸಿದ್ದರು. ಅದು ಇಂಡಿಯನ್ ಸೂಪರ್ ಲೀಗ್ನ ಆರಂಭಕ್ಕೂ ಕಾರಣವಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.