ವಾಸ್ಕೊ: ಕಳೆದ 10 ಪಂದ್ಯಗಳಲ್ಲಿ ಅಜೇಯವಾಗುಳಿದಿರುವ ಹೈದರಾಬಾದ್ ಎಫ್ಸಿ (ಎಚ್ಎಫ್ಸಿ) ತಂಡವು ಪ್ಲೇ ಆಫ್ ಮೇಲೆ ಕಣ್ಣಿಟ್ಟಿದ್ದು, ಇಂಡಿಯನ್ ಸೂಪರ್ ಲೀಗ್ (ಐಎಸ್ಎಲ್) ಫುಟ್ಬಾಲ್ ಟೂರ್ನಿಯಲ್ಲಿ ಸೋಮವಾರ ನಡೆಯಲಿರುವ ಪಂದ್ಯದಲ್ಲಿ ಬಲಿಷ್ಠ ಎಟಿಕೆ ಮೋಹನ್ ಬಾಗನ್ (ಎಟಿಕೆಎಂಬಿ) ತಂಡವನ್ನು ಎದುರಿಸಲಿದೆ.

ಪಾಯಿಂಟ್ಸ್ ಪಟ್ಟಿಯಲ್ಲಿ ಸದ್ಯ ಮೂರನೇ ಸ್ಥಾನದಲ್ಲಿರುವ ಎಚ್ಎಫ್ಸಿ, ಟೂರ್ನಿಯಲ್ಲಿ ಮೊದಲ ಬಾರಿ ಪ್ಲೇ ಆಫ್ ಪ್ರವೇಶಿಸುವತ್ತ ಚಿತ್ತ ನೆಟ್ಟಿದೆ. ಈ ವರ್ಷದ ಆರಂಭದಿಂದ ಆ ತಂಡವು ಸೋಲು ಅನುಭವಿಸಿಲ್ಲ.

ಇದೇ ಲಯವನ್ನು ಮುಂದುವರಿಸಿ ಈ ಪಂದ್ಯದಲ್ಲಿ ಹೈದರಾಬಾದ್ ಸೋಲದೇ ಇದ್ದರೆ, ಅಗ್ರ ನಾಲ್ಕು ತಂಡಗಳಲ್ಲಿ ಸ್ಥಾನ ಗಳಿಸುವುದು ಸಾಧ್ಯವಾಗಲಿದೆ. ಅಲ್ಲದೆ ಐಎಸ್ಎಲ್ ಇತಿಹಾಸದಲ್ಲಿಯೇ ಅತಿ ಹೆಚ್ಚು ಪಂದ್ಯಗಳಲ್ಲಿ ಅಜೇಯವಾಗುಳಿದ ಎರಡನೇ ತಂಡ ಎನಿಸಿಕೊಳ್ಳಲಿದೆ.

ಪ್ಲೇ ಆಫ್ನಲ್ಲಿ ಈಗಾಗಲೇ ಸ್ಥಾನ ಖಚಿತಪಡಿಸಿಕೊಂಡಿರುವ ಎಟಿಕೆ ಮೋಹನ್ ಬಾಗನ್ ತಂಡಕ್ಕೂ ಜಯ ಬೇಕಾಗಿದೆ. ಈ ಗೆಲುವಿನಿಂದ ಲೀಗ್ ವಿಜೇತರು ಎಂಬ ಶ್ರೇಯವನ್ನು ಅದು ಹೊಂದಲಿದೆ. ಅಲ್ಲದೆ ಎಎಫ್ಸಿ ಚಾಂಪಿಯನ್ಸ್ ಲೀಗ್ನಲ್ಲಿ ಸ್ಥಾನ ಪಡೆಯಲಿದೆ.

ಪಂದ್ಯ ಆರಂಭ: ಸಂಜೆ 7.30

ಸ್ಥಳ; ತಿಲಕ್ ಮೈದಾನ, ವಾಸ್ಕೊ

ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.