ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐ ಲೀಗ್ ಫುಟ್‌ಬಾಲ್ ಟೂರ್ನಿಯಲ್ಲಿ ಫಿಕ್ಸಿಂಗ್: ಎಐಎಫ್‌ಎಫ್

Published 30 ನವೆಂಬರ್ 2023, 14:47 IST
Last Updated 30 ನವೆಂಬರ್ 2023, 14:47 IST
ಅಕ್ಷರ ಗಾತ್ರ

ನವದೆಹಲಿ: ಐ ಲೀಗ್ ಫುಟ್‌ಬಾಲ್ ಟೂರ್ನಿಯ ಪಂದ್ಯಗಳನ್ನು ಫಿಕ್ಸಿಂಗ್ ಮಾಡಲು ಕೆಲವು ಆಟಗಾರರನ್ನು ಬುಕ್ಕಿಗಳು ಸಂಪರ್ಕಿಸಿದ್ದರು. ಈ ಪ್ರಕರಣವನ್ನು ತನಿಖೆಗೊಳಪಡಿಸಲಾಗುವುದು ಎಂದು ಅಖಿಲ ಭಾರತ ಫುಟ್‌ಬಾಲ್ ಫೆಡರೇಷನ್ (ಎಐಎಫ್‌ಎಫ್‌) ತಿಳಿಸಿದೆ.

‘ನಮ್ಮ ಆಟಗಾರರನ್ನು ಕೆಲವರು ಹಲವು ಬಾರಿ ಸಂಪರ್ಕಿಸಿರುವ ಬಗ್ಗೆ ಮಾಹಿತಿ ಲಭಿಸಿದೆ. ಅದನ್ನು ಕೂಲಂಕಷವಾಗಿ ಪರಿಶೀಲಿಸಲಾಗುವುದು. ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಎಐಎಫ್‌ಎಫ್‌ ಅಧ್ಯಕ್ಷ ಕಲ್ಯಾಣ್ ಚೌಬೆ ತಿಳಿಸಿದ್ದಾರೆ.

ಆದರೆ ಅವರು ತಮಗೆ ಯಾವ ಮೂಲದಿಂದ ಮಾಹಿತಿ ಲಭಿಸಿದೆ ಎಂಬುದನ್ನು ಸ್ಪಷ್ಟಪಡಿಸಲಿಲ್ಲ.

‘ನಮ್ಮ ಆಟಗಾರರು ಮತ್ತು ಈ ಸುಂದರ ಆಟದ ಸುರಕ್ಷತೆಯನ್ನು ಕಾಪಾಡಾಲು ಬದ್ಧವಾಗಿದ್ದೇವೆ. ಇಂತಹ ಪ್ರಕರಣಗಳನ್ನು ನಾವು ಸಹಿಸುವುದಿಲ್ಲ.  ಇಂತಹ ಕೆಟ್ಟ ಚಟುವಟಿಕೆಗಳಿಂದ ಆಟ ಮತ್ತು ಆಟಗಾರರ ಭವಿಷ್ಯಕ್ಕೆ ಧಕ್ಕೆಯಾಗುತ್ತದೆ’ ಎಂದು ಕಳವಳ ವ್ಯಕ್ತಪಡಿಸಿದರು.

2023ರ ಐ ಲೀಗ್ ಟೂರ್ನಿಯಲ್ಲಿ ಅಕ್ಟೋಬರ್‌ನಲ್ಲಿ  ಆರಂಭವಾಗಿತ್ತು. 40 ಪಂದ್ಯಗಳು ಈಗಾಗಲೇ ನಡೆದಿವೆ. 13 ತಂಡಗಳು  ಕಣದಲ್ಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT