ಭಾನುವಾರ, ಜುಲೈ 3, 2022
25 °C

ಫುಟ್‌ಬಾಲ್ ಆಟಗಾರ ಅನಿರುದ್ಧ ಥಾಪಾಗೆ ಕೋವಿಡ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಭಾರತ ಫುಟ್‌ಬಾಲ್ ತಂಡದ ಮಿಡ್‌ಫೀಲ್ಡರ್‌ ಅನಿರುದ್ಧ ಥಾಪಾ ಅವರಿಗೆ ಕೋವಿಡ್‌ ಇರುವುದು ದೃಢಪಟ್ಟಿದೆ. ತಂಡವು ಸದ್ಯ ದೋಹಾದಲ್ಲಿದ್ದು, ಥಾಪಾ ಕ್ವಾರಂಟೈನ್‌ನಲ್ಲಿದ್ದಾರೆ.

ವಿಶ್ವಕಪ್ ಹಾಗೂ ಏಷ್ಯಾಕಪ್ ಜಂಟಿ ಅರ್ಹತಾ ಟೂರ್ನಿಯಲ್ಲಿ ಪಾಲ್ಗೊಂಡಿರುವ ಭಾರತ ತಂಡ ಗುರುವಾರ ಕತಾರ್ ಎದುರು ಸೋಲು ಅನುಭವಿಸಿತ್ತು.

‘ಥಾಪಾ ಅವರಿಗೆ ಕೋವಿಡ್ ದೃಢಪಟ್ಟಿದೆ. ತಂಡದ ಸದಸ್ಯರಿಂದ ಅವರು ಪ್ರತ್ಯೇಕವಾಗಿದ್ದಾರೆ‘ ಎಂದು ಅಖಿಲ ಭಾರತ ಫುಟ್‌ಬಾಲ್ ಫಡೆರೇಷನ್‌ನ (ಎಐಎಫ್‌ಎಫ್‌) ಪ್ರಧಾನ ಕಾರ್ಯದರ್ಶಿ ಕುಶಲ್ ದಾಸ್ ತಿಳಿಸಿದ್ದಾರೆ.

ಇಂಡಿಯನ್ ಸೂಪರ್ ಲೀಗ್ (ಐಎಸ್‌ಎಲ್‌) ಟೂರ್ನಿಯಲ್ಲಿ ಚೆನ್ನೈಯಿನ್ ಎಫ್‌ಸಿ ಪರ ಆಡುವ ಥಾಪಾ ಅವರು ಕೆಲವು ದಿನಗಳ ಬಳಿಕ ಇನ್ನೊಮ್ಮೆ ಪರೀಕ್ಷೆಗೆ ಒಳಪಡಲಿದ್ದಾರೆ. ಭಾರತ ತಂಡದ ಪರ ಅವರು 20ಕ್ಕಿಂತ ಹೆಚ್ಚು ಪಂದ್ಯಗಳನ್ನು ಆಡಿದ್ದಾರೆ.

ಸೋಮವಾರ ನಡೆಯುವ ಪಂದ್ಯದಲ್ಲಿ ಭಾರತ ತಂಡವು ಬಾಂಗ್ಲಾದೇಶವನ್ನು ಎದುರಿಸಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು