ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫಿಫಾ ರ‍್ಯಾಂಕಿಂಗ್‌: 104ನೇ ಸ್ಥಾನದಲ್ಲಿ ಭಾರತ

ಅಗ್ರ ಸ್ಥಾನದಲ್ಲಿ ಬೆಲ್ಜಿಯಂ
Last Updated 19 ಸೆಪ್ಟೆಂಬರ್ 2019, 19:34 IST
ಅಕ್ಷರ ಗಾತ್ರ

ಜುರಿಚ್‌: ಇತ್ತೀಚಿನ ದಿನಗಳಲ್ಲಿ ಹೆಚ್ಚು ಪಂದ್ಯಗಳನ್ನು ಆಡುತ್ತಿರುವ ಭಾರತ ಫುಟ್‌ಬಾಲ್‌ ತಂಡ, ಗುರುವಾರ ಪ್ರಕಟವಾದ ಫಿಫಾ ರ‍್ಯಾಂಕಿಂಗ್‌ನಲ್ಲಿ 104ನೇ ಸ್ಥಾನಕ್ಕೆ ಇಳಿದಿದೆ.

ಬೆಲ್ಜಿಯಂ ಮೊದಲ ಸ್ಥಾನ ಉಳಿಸಿಕೊಂಡಿದ್ದು, ಬ್ರೆಜಿಲ್‌ ತಂಡವನ್ನು ಮೂರನೇ ಸ್ಥಾನಕ್ಕೆ ತಳ್ಳಿರುವ ಫ್ರಾನ್ಸ್‌ ಎರಡನೇ ಸ್ಥಾನಕ್ಕೆ ಲಗ್ಗೆ ಹಾಕಿದೆ.

ಭಾರತ ಈ ತಿಂಗಳ ಆರಂಭದಲ್ಲಿ ಏಷ್ಯನ್‌ ಚಾಂಪಿಯನ್ಸ್‌ ಕತಾರ್‌ ವಿರುದ್ಧ ಗೋಲಿಲ್ಲದೇ ಡ್ರಾ ಮಾಡಿಕೊಂಡು, 2022ರ ವಿಶ್ವ ಕಪ್‌ ಅರ್ಹತಾ ಟೂರ್ನಿಯಲ್ಲಿ ಮೊದಲ ಪಾಯಿಂಟ್‌ ಗಳಿಸಿತ್ತು. ಈ ಡ್ರಾ ಹೊರತಾಗಿಯೂ ಕತಾರ್‌, ರ‍್ಯಾಂಕಿಂಗ್‌ ಪಟ್ಟಿಯಲ್ಲಿ 62ನೇ ಸ್ಥಾನ ಉಳಿಸಿಕೊಂಡಿದೆ. ಅರ್ಹತಾ ಟೂರ್ನಿಯ್ಲಲಿ ಭಾರತ ವಿರುದ್ಧ 2–1 ಜಯಗಳಿಸಿದ್ದ ಒಮಾನ್‌ ತಂಡ ಮೂರು ಸ್ಥಾನ ಬಡ್ತಿ ಪಡೆದಿದ್ದು 84ನೇ ಸ್ಥಾನಕ್ಕೆ ಏರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT