ಸುಝೌ (ಚೀನಾ), (ಪಿಟಿಐ): ಭಾರತ ಮಹಿಳಾ ತಂಡವು ಮಂಗಳವಾರ ಎಎಫ್ಸಿ 17 ವರ್ಷದೊಳಗಿನವರ ಏಷ್ಯನ್ ಕಪ್ ಫುಟ್ಬಾಲ್ ಟೂರ್ನಿಯಲ್ಲಿ ಬಲಿಷ್ಠ ಜಪಾನ್ ಎದುರು ಕಠಿಣ ಪರೀಕ್ಷೆ ಎದುರಿಸಲಿದೆ.

ಬಿ ಗುಂಪಿನಲ್ಲಿರುವ ‘ಬ್ಲೂಸ್’ ಪಡೆಯು ತಮ್ಮ ಆರಂಭಿಕ ಪಂದ್ಯದಲ್ಲಿ 0–2ರಿಂದ ಆಸ್ಟ್ರೇಲಿಯಾ ತಂಡಕ್ಕೆ ಮಣಿದಿತ್ತು. ನಾಕೌಟ್ ಕನಸನ್ನು ಜೀವಂತವಾಗಿ ಉಳಿಸಿಕೊಳ್ಳಲು ಜಪಾನ್ ವಿರುದ್ಧ ಗೆಲ್ಲಲೇಬೇಕಾದ ಒತ್ತಡದಲ್ಲಿದೆ.

ಜಪಾನ್ ತಂಡವು 13–0ಯಿಂದ ಲೆಬನಾನ್ ತಂಡವನ್ನು ಸೋಲಿಸಿ ಅಭಿಯಾನ ಆರಂಭಿಸಿತ್ತು. ಒಟ್ಟು ಒಂಬತ್ತು ಆವೃತ್ತಿಗಳಲ್ಲಿ ಏಳರಲ್ಲಿ ಫೈನಲ್ ತಲುಪಿರುವ ಜಪಾನ್ ತಂಡವು ಐದನೇ ಬಾರಿ ಪ್ರಶಸ್ತಿ ಜಯಿಸುವ ಛಲದಲ್ಲಿದೆ.

ಜಪಾನ್ ಮತ್ತು ಆಸ್ಟ್ರೇಲಿಯಾ ತಂಡಗಳು ತಲಾ 3 ಅಂಕಗಳೊಂದಿಗೆ ಗುಂಪಿನಲ್ಲಿ ಕ್ರಮವಾಗಿ ಮೊದಲೆರಡು ಸ್ಥಾನದಲ್ಲಿವೆ. ಅಂಕ ಖಾತೆ ತೆರೆಯದ ಭಾರತ ಮತ್ತು ಲೆಬನಾನ್ ತಂಡಗಳು ನಂತರದ ಸ್ಥಾನದಲ್ಲಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-51-524857417

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.