ಬುಧವಾರ, 27 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಎಸ್‌ಎಲ್‌: ಬಿಎಫ್‌ಸಿಗೆ ಆರಂಭಿಕ ಪಂದ್ಯದಲ್ಲಿ ಬ್ಲಾಸ್ಟರ್ಸ್‌ ಎದುರಾಳಿ

Published 7 ಸೆಪ್ಟೆಂಬರ್ 2023, 16:22 IST
Last Updated 7 ಸೆಪ್ಟೆಂಬರ್ 2023, 16:22 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ಎಫ್‌ಸಿ ತಂಡವು 2023–24ರ ಋತುವಿನ ಇಂಡಿಯನ್‌ ಸೂಪರ್‌ ಲೀಗ್‌ (ಐಎಸ್‌ಎಲ್‌) ಟೂರ್ನಿಯ ಆರಂಭಿಕ ಪಂದ್ಯದಲ್ಲಿ ಕೇರಳ ಬ್ಲಾಸ್ಟರ್ಸ್ ಎಫ್‌ಸಿ ವಿರುದ್ಧ ಕೊಚ್ಚಿಯಲ್ಲಿ ಸೆ.21ರಂದು ಅಭಿಯಾನ ಆರಂಭಿಸಲಿದೆ.

ಎರಡನೇ ಪಂದ್ಯದಲ್ಲಿ (ಸೆ.27) ಬಿಎಫ್‌ಸಿ ತಂಡವು ಹಾಲಿ ಚಾಂಪಿಯನ್‌ ಮೋಹನ್ ಬಾಗನ್ ಸೂಪರ್ ಜೈಂಟ್ ವಿರುದ್ಧ ಪೈಪೋಟಿ ನಡೆಸಲಿದೆ. 2022–23 ಆವೃತ್ತಿಯ ಫೈನಲ್‌ ಬಳಿಕ ಈ ತಂಡಗಳು ಮುಖಾಮುಖಿಯಾಗಲಿವೆ. ಬೆಂಗಳೂರು ತಂಡವು ತವರಿನಲ್ಲಿ ಅ.4ರಂದು ಈಸ್ಟ್‌ ಬೆಂಗಾಲ್‌ ಎಫ್‌ಸಿ ವಿರುದ್ಧ ಸೆಣಸಾಡಲಿದೆ.

ಇಂಡಿಯನ್‌ ಸೂಪರ್‌ ಲೀಗ್‌ ಟೂರ್ನಿಯ ಜತೆಜತೆಯಲ್ಲೇ ಏಷ್ಯನ್ ಕ್ರೀಡಾಕೂಟ ಆರಂಭವಾಗಲಿದೆ. ಬೆಂಗಳೂರು ಎಫ್‌ಸಿ ತಂಡದ ಆರು ಆಟಗಾರರು ಏಷ್ಯಾಡ್‌ಗಾಗಿ ಪ್ರಕಟಿಸಿದ 22 ಮಂದಿಯ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT