ಭಾನುವಾರ, ಸೆಪ್ಟೆಂಬರ್ 20, 2020
23 °C

ಅಹಮದಾಬಾದ್‌ನಲ್ಲಿ ಇಂಟರ್‌ ಕಾಂಟಿನೆಂಟಲ್‌ ಕಪ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಎರಡನೇ ಆವೃತ್ತಿಯ ಹೀರೊ ಇಂಟರ್‌ ಕಾಂಟಿನೆಂಟಲ್‌ ಕಪ್‌ ಫುಟ್‌ಬಾಲ್‌ ಟೂರ್ನಿಯು ಜುಲೈ 7ರಿಂದ 18ರವರೆಗೆ ಅಹಮದಾಬಾದ್‌ನಲ್ಲಿ ನಡೆಯಲಿದೆ.

ಅಖಿಲ ಭಾರತ ಫುಟ್‌ಬಾಲ್‌ ಫೆಡರೇಷನ್‌ (ಎಐಎಫ್‌ಎಫ್‌) ಶನಿವಾರ ಈ ವಿಷಯ ತಿಳಿಸಿದೆ.

ಆತಿಥೇಯ ಭಾರತ, ಸಿರಿಯಾ, ಉತ್ತರ ಕೊರಿಯಾ ಮತ್ತು ತಜಿಕಿಸ್ತಾನ ತಂಡಗಳು ಟೂರ್ನಿಯಲ್ಲಿ ಪ್ರಶಸ್ತಿಗಾಗಿ ಪೈಪೋಟಿ ನಡೆಸಲಿವೆ.

ರೌಂಡ್‌ ರಾಬಿನ್‌ ಮಾದರಿಯಲ್ಲಿ ಆಯೋಜನೆಯಾಗಿರುವ ಟೂರ್ನಿಯಲ್ಲಿ ಎಲ್ಲಾ ತಂಡಗಳು ಪರಸ್ಪರ ಒಮ್ಮೆ ಮುಖಾಮುಖಿಯಾಗಲಿದ್ದು ಅಗ್ರ ಎರಡು ಸ್ಥಾನ ಪಡೆಯುವವರು ಫೈನಲ್‌ಗೆ ಅರ್ಹತೆ ಗಳಿಸಲಿದ್ದಾರೆ.

ಭಾರತ ತಂಡವು ಹೋದ ವರ್ಷದ ಜೂನ್‌ನಲ್ಲಿ ಮುಂಬೈಯಲ್ಲಿ ನಡೆದಿದ್ದ ಚೊಚ್ಚಲ ಟೂರ್ನಿಯಲ್ಲಿ ಚಾಂಪಿಯನ್‌ ಆಗಿತ್ತು. ಫೈನಲ್‌ನಲ್ಲಿ ಭಾರತ 2–0 ಗೋಲುಗಳಿಂದ ಕೀನ್ಯಾವನ್ನು ಸೋಲಿಸಿತ್ತು. ಸುನಿಲ್‌ ಚೆಟ್ರಿ 8 ಮತ್ತು 29ನೇ ನಿಮಿಷಗಳಲ್ಲಿ ಚೆಂಡನ್ನು ಗುರಿ ಮುಟ್ಟಿಸಿ ಗೆಲುವಿನ ರೂವಾರಿಯಾಗಿದ್ದರು.

ಗುಂಪು ಹಂತದಲ್ಲಿ ಭಾರತವು ಮೂರು ಪಂದ್ಯಗಳ ಪೈಕಿ ಎರಡರಲ್ಲಿ ಗೆದ್ದು ಆರು ಪಾಯಿಂಟ್ಸ್‌ ಕಲೆಹಾಕಿತ್ತು. ಅಗ್ರಸ್ಥಾನದೊಂದಿಗೆ ಫೈನಲ್‌ ಪ್ರವೇಶಿಸಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು