ಗುರುವಾರ , ಜನವರಿ 27, 2022
27 °C

ಐಎಸ್‌ಎಲ್‌: ಈಸ್ಟ್ ಬೆಂಗಾಲ್‌–ಮುಂಬೈ ಸಮಬಲದ ಹೋರಾಟ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ವಾಸ್ಕೊ: ಬಲಿಷ್ಠ ಮುಂಬೈ ಸಿಟಿ ಎಫ್‌ಸಿಯ ವಿರುದ್ಧ ದಿಟ್ಟ ಆಟವಾಡಿದ ಎಸ್‌ಸಿ ಈಸ್ಟ್ ಬೆಂಗಾಲ್ ತಂಡ ಇಂಡಿಯನ್ ಸೂಪರ್ ಲೀಗ್ (ಐಎಸ್‌ಎಲ್‌) ಫುಟ್‌ಬಾಲ್ ಟೂರ್ನಿಯ ಶನಿವಾರದ ಪಂದ್ಯದಲ್ಲಿ ಗೋಲುರಹಿತ ಡ್ರಾ ಸಾಧಿಸುವಲ್ಲಿ ಯಶಸ್ವಿಯಾಯಿತು. ಮುಂಬೈ ಸಿಟಿ ಪಂದ್ಯದುದ್ದಕ್ಕೂ ಆಧಿಪತ್ಯ ಸ್ಥಾಪಿಸಿತು. ಆದರೆ ಚೆಂಡನ್ನು ಗುರಿ ಮುಟ್ಟಿಸಲು ಎಸ್‌ಸಿ ಈಸ್ಟ್ ಬೆಂಗಾಲ್ ಅವಕಾಶ ನೀಡಲಿಲ್ಲ. ಚೆಂಡಿನ ಮೇಲೆ ಹಿಡಿತದಲ್ಲಿ ಹಿಂದೆ ಬಿದ್ದ ಈಸ್ಟ್ ಬೆಂಗಾಲ್‌ಗೂ ಗೋಲು ಗಳಿಸಲು ಆಗಲಿಲ್ಲ. 

ಈ ಡ್ರಾದೊಂದಿಗೆ ಮುಂಬೈ ಸಿಟಿ ಎಫ್‌ಸಿ ಮತ್ತು ಪಾಯಿಂಟ್ ಪಟ್ಟಿಯ ಅಗ್ರಸ್ಥಾನಕ್ಕೇರಿತು. ಗುರುವಾರ ಜಯ ಗಳಿಸಿದ್ದ ತಂಡ 10 ಪಂದ್ಯಗಳ ಪೈಕಿ ಐದರಲ್ಲಿ ಗೆಲುವು ಸಾಧಿಸಿದೆ. ಒಂದು ಪಂದ್ಯವನ್ನೂ ಗೆಲ್ಲದ ಈಸ್ಟ್ ಬೆಂಗಾಲ್ ಪಟ್ಟಿಯ ಕೊನೆಯ ಸ್ಥಾನದಲ್ಲಿದೆ.

ಶನಿವಾರ ಎರಡು ಪಂದ್ಯಗಳನು ನಡೆಯಲಿದ್ದು ಬ್ಯಾಂಬೊಲಿನ್‌ನಲ್ಲಿ ಎಟಿಕೆ ಮೋಹನ್ ಬಾಗನ್ ಮತ್ತು ಒಡಿಶಾ ಎಫ್‌ಸಿ ತಂಡಗಳು ಸೆಣಸಲಿವೆ. ಈ ಪಂದ್ಯ ರಾತ್ರಿ 7.30ಕ್ಕೆ ನಡೆಯಲಿದೆ. 9.30ಕ್ಕೆ ಆತಿಥೇಯ ಎಫ್‌ಸಿ ಗೋವಾ ಮತ್ತು ಚೆನ್ನೈಯಿನ್ ಎಫ್‌ಸಿ ನಡುವೆ ಹಣಾಹಣಿ ನಡೆಯಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು