ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಎಸ್‌ಎಲ್‌: ಡ್ರಾ ಪಂದ್ಯದಲ್ಲಿ ಬಿಎಫ್‌ಸಿ ತಂಡ

Published 26 ಅಕ್ಟೋಬರ್ 2023, 14:29 IST
Last Updated 26 ಅಕ್ಟೋಬರ್ 2023, 14:29 IST
ಅಕ್ಷರ ಗಾತ್ರ

ಬೆಂಗಳೂರು: ಬಿಎಫ್‌ಸಿ ತಂಡವು ಇಲ್ಲಿನ ಕಂಠೀರವ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಇಂಡಿಯನ್‌ ಸೂಪರ್‌ ಲೀಗ್‌ನ ಪಂದ್ಯದಲ್ಲಿ ಎಫ್‌ಸಿ ಗೋವಾ ತಂಡದೊಂದಿಗೆ ಗೋಲುರಹಿತವಾಗಿ ಡ್ರಾ ಸಾಧಿಸಿತು.

ಟೂರ್ನಿಯಲ್ಲಿ ಆಡಿರುವ ಮೂರೂ ಪಂದ್ಯಗಳನ್ನು ಗೆದ್ದು ಆತ್ಮವಿಶ್ವಾಸದಿಂದ ಮೈದಾನಕ್ಕೆ ಇಳಿದಿದ್ದ ಗೋವಾ ತಂಡದ ಆಟಗಾರರು ಆರಂಭದಲ್ಲಿ ಚುರುಕಿನ ಆಟದ ಮೂಲಕ ಗಮನ ಸೆಳೆದರು.

ಕೆಲ ಬದಲಾವಣೆಯೊಂದಿಗೆ ಕಣಕ್ಕೆ ಇಳಿದಿದ್ದ ಆತಿಥೇಯ ತಂಡ ದಲ್ಲಿ ಸಮನ್ವಯದ ಕೊರತೆ ಎದ್ದು ಕಾಣುತ್ತಿತ್ತು. ಹಾಲಿಚರಣ್ ನರ್ಜಾರಿ ಮತ್ತು ರೋಹಿತ್ ದಾನು ಚೊಚ್ಚಲ ಪಂದ್ಯದಲ್ಲಿ ಹೊಂದಿಕೊಳ್ಳಲು ಸಮಯ ತೆಗೆದುಕೊಂಡರು. ರೋಶನ್ ಸಿಂಗ್ ಮತ್ತು ಸುರೇಶ್ ವಾಂಗ್‌ಜಮ್ ಸೇರ್ಪಡೆ ತಂಡಕ್ಕೆ ಕೊಂಚ ಬಲ ತಂದುಕೊಟ್ಟಿತು.

ಕೊನೆಯ ಹಂತದಲ್ಲಿ ಉಭಯ ತಂಡಗಳ ಆಟಗಾರರು ನಿರ್ಣಾಯಕ ಗೋಲು ಗಳಿಸಲು ಪ್ರಯತ್ನ ನಡೆಸಿದರು. ಆದರೆ, ಅದು ಸಫಲವಾಗಲಿಲ್ಲ. ಹೀಗಾಗಿ, ಎರಡು ತಂಡಗಳು ತಲಾ ಒಂದು ಪಾಯಿಂಟ್‌ಗೆ ತೃಪ್ತಿಪಟ್ಟವು.

ಆಡಿರುವ ಮೂರೂ ಪಂದ್ಯಗಳಲ್ಲಿ ಮೊದಲ ಎರಡು ಪಂದ್ಯಗಳನ್ನು ಸೋತು, ತವರಿನಲ್ಲಿ ನಡೆದ ಮೂರನೇ ಪಂದ್ಯ ದಲ್ಲಿ ಬಿಎಫ್‌ಸಿ ಗೆಲುವು ಸಾಧಿಸಿತ್ತು. ನಾಲ್ಕನೇ ಪಂದ್ಯವನ್ನು ಡ್ರಾ ಸಾಧಿಸಿದ ಬಿಎಫ್‌ಸಿ ಪಾಯಿಂಟ್‌ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿ ಮುಂದುವರಿದಿದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT