ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಎಸ್‌ಎಲ್‌: ಗೋವಾಗೆ ಗೆಲುವು

Last Updated 14 ಫೆಬ್ರುವರಿ 2019, 16:43 IST
ಅಕ್ಷರ ಗಾತ್ರ

ಫತ್ರೋಡಾ: ಆಟದ ಎಲ್ಲಾ ವಿಭಾಗಗಳಲ್ಲೂ ಪಾರಮ್ಯ ಮೆರೆದ ಎಫ್‌ಸಿ ಗೋವಾ ತಂಡ ಇಂಡಿಯನ್‌ ಸೂಪರ್‌ ಲೀಗ್‌ (ಐಎಸ್‌ಎಲ್‌) ಫುಟ್‌ಬಾಲ್‌ ಪಂದ್ಯದಲ್ಲಿ ಗೆಲುವಿನ ಸಿಹಿ ಸವಿದಿದೆ.

ಜವಾಹರಲಾಲ್‌ ನೆಹರೂ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಹೋರಾಟದಲ್ಲಿ ಎಫ್‌ಸಿ ಗೋವಾ 3–0 ಗೋಲುಗಳಿಂದ ಎಟಿಕೆ ತಂಡವನ್ನು ಪರಾಭವಗೊಳಿಸಿತು.ಇದರೊಂದಿಗೆ ಪಾಯಿಂಟ್ಸ್‌ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದ ತಂಡ ‘ಪ್ಲೇ ಆಫ್‌’ ಹಾದಿಯನ್ನು ಸುಗಮ ಮಾಡಿಕೊಂಡಿತು.

ತವರಿನ ಅಭಿಮಾನಿಗಳ ಬೆಂಬಲದೊಂದಿಗೆ ಮೈದಾನಕ್ಕಿಳಿದಿದ್ದ ಗೋವಾ ತಂಡ ಮೊದಲ ನಿಮಿಷದಲ್ಲೇ ಖಾತೆ ತೆರೆಯಿತು. ಜಾಕಿಚಂದ್‌ ಸಿಂಗ್‌ ಗೋಲು ಹೊಡೆದು ಸಂಭ್ರಮಿಸಿದರು.

ದ್ವಿತೀಯಾರ್ಧದಲ್ಲಿ ಫೆರಾನ್‌ ಕೊರೊಮಿನಾಸ್‌ ಕಾಲ್ಚಳಕ ತೋರಿದರು. 52ನೇ ನಿಮಿಷದಲ್ಲಿ ಗೋಲು ಬಾರಿಸಿದ ಅವರು ಆತಿಥೇಯರಿಗೆ 2–0 ಮುನ್ನಡೆ ತಂದುಕೊಟ್ಟರು. 81ನೇ ನಿಮಿಷದಲ್ಲಿ ಸಿಕ್ಕ ಪೆನಾಲ್ಟಿ ಕಾರ್ನರ್‌ ಅವಕಾಶವನ್ನು ಗೋಲಾಗಿ ಪರಿವರ್ತಿಸಿ ತವರಿನ ಅಭಿಮಾನಿಗಳ ಪ್ರೀತಿಗೆ ಪಾತ್ರರಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT