ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೆಟ್ರಿ ಪಡೆಗೆ ಎಫ್‌ಸಿ ಗೋವಾ ಸವಾಲು

Last Updated 22 ಫೆಬ್ರುವರಿ 2023, 21:45 IST
ಅಕ್ಷರ ಗಾತ್ರ

ಬೆಂಗಳೂರು: ಗೆಲುವಿನ ಓಟ ಮುಂದುವರಿಸುವ ವಿಶ್ವಾಸದಲ್ಲಿರುವ ಬೆಂಗಳೂರು ಎಫ್‌ಸಿ ತಂಡವು ಇಂಡಿಯನ್ ಸೂಪರ್ ಲೀಗ್‌ (ಐಎಸ್‌ಎಲ್‌) ಫುಟ್‌ಬಾಲ್ ಟೂರ್ನಿಯಲ್ಲಿ ಗುರುವಾರ ಎಫ್‌ಸಿ ಗೋವಾ ಸವಾಲು ಎದುರಿಸಲಿದೆ.

ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯವು ಸುನಿಲ್ ಚೆಟ್ರಿ ನಾಯಕತ್ವದ ಬೆಂಗಳೂರು ಎಫ್‌ಸಿಗೆ (ಬಿಎಫ್‌ಸಿ) ಲೀಗ್‌ ಹಂತದ ಕೊನೆಯ ಪಂದ್ಯವಾಗಿದೆ. ಈಗಾಗಲೇ ಪ್ಲೇ ಆಫ್‌ ಹಂತ ತಲುಪಿರುವ ತಂಡವು ಈ ಸೆಣಸಾಟದಲ್ಲಿ ನಿರಾಳವಾಗಿ ಆಡಲಿದೆ.

ಲೀಗ್‌ ಹಂತದ ಸ್ಥಾನವನ್ನು ನಿರ್ಧರಿಸುವುದರಿಂದ ಈ ಪಂದ್ಯವು ಬಿಎಫ್‌ಸಿಗೆ ಮಹತ್ವದ್ದೆನಿಸಿದೆ.

ಸತತ ಏಳು ಪಂದ್ಯಗಳಲ್ಲಿ ಗೆಲುವು ದಾಖಲಿಸಿರುವ ಬೆಂಗಳೂರು ಹೆಚ್ಚಿನ ವಿಶ್ವಾಸದಲ್ಲಿದೆ. ಸತತ ಎರಡು ಪಂದ್ಯಗಳನ್ನು ಸೋತಿರುವ ಗೋವಾ ತಂಡವು ಇಲ್ಲಿ ಪುಟಿದೇಳುವ ಕಾತರದಲ್ಲಿದೆ.

ಪಂದ್ಯ ಆರಂಭ: ರಾತ್ರಿ 7.30

ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT