‘ಹ್ಯಾಟ್ರಿಕ್’ ಜಯದ ಮೇಲೆ ಗೋವಾ ಕಣ್ಣು

ವಾಸ್ಕೊ: ಇಂಡಿಯನ್ ಸೂಪರ್ ಲೀಗ್ (ಐಎಸ್‌ಎಲ್) ಫುಟ್‌ಬಾಲ್ ಟೂರ್ನಿಯಲ್ಲಿ ಮೊದಲ ಜಯ ದಾಖಲಿಸಿರುವ ಎಸ್‌ಸಿ ಈಸ್ಟ್ ಬೆಂಗಾಲ್ ತಂಡವು ಅದೇ ಲಯ ಮುಂದುವರಿಸುವ ತವಕದಲ್ಲಿದೆ. ಇಲ್ಲಿಯ ತಿಲಕ್ ಕ್ರೀಡಾಂಗಣದಲ್ಲಿ ಬುಧವಾರ ನಡೆಯಲಿರುವ ಪಂದ್ಯದಲ್ಲಿ ಆತಿಥೇಯ ಎಫ್‌ಸಿ ಗೋವಾ ತಂಡವನ್ನು ಎದುರಿಸಲಿದೆ. ಸತತ ಎರಡು ಪಂದ್ಯಗಳಲ್ಲಿ ಗೆದ್ದು ಆತ್ಮವಿಶ್ವಾಸದಲ್ಲಿರುವ ಗೋವಾ ತಂಡವು ‘ಹ್ಯಾಟ್ರಿಕ್ ‘ ನಿರೀಕ್ಷೆಯಲ್ಲಿದೆ.
ಈಸ್ಟ್ ಬೆಂಗಾಲ್ ತಂಡಕ್ಕೆ ಹೊಸ ವರ್ಷ ಅದೃಷ್ಟ ತಂದಿದೆ. ಕಳೆದ ಪಂದ್ಯದಲ್ಲಿ ಆ ತಂಡವು ಒಡಿಶಾ ಎಫ್‌ಸಿಯನ್ನು ಮಣಿಸುವ ಮೂಲಕ ಟೂರ್ನಿಯಲ್ಲಿ ಮೊದಲ ಜಯ ಸಂಪಾದಿಸಿತ್ತು.
ಈಸ್ಟ್ ಬೆಂಗಾಲ್ ತಂಡ ಪಾಯಿಂಟ್ಸ್ ಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದೆ. ಕಳೆದ ಎರಡು ಪಂದ್ಯಗಳಲ್ಲಿ ಕ್ರಮವಾಗಿ ಜೆಮ್ಶೆಡ್‌ಪುರ ಹಾಗೂ ಹೈದರಾಬಾದ್ ತಂಡಗಳನ್ನು ಸೋಲಿಸಿರುವ ಗೋವಾ ಸದ್ಯ ಮೂರನೇ ಸ್ಥಾನದಲ್ಲಿದೆ.
ಉಭಯ ತಂಡಗಳು ಜಿದ್ದಾಜಿದ್ದಿನ ಪೈಪೋಟಿ ನಡೆಯುವ ನಿರೀಕ್ಷೆಯಿದೆ.
ಪಂದ್ಯ ಆರಂಭ: ಸಂಜೆ 7.30
ಸ್ಥಳ: ತಿಲಕ್ ಕ್ರೀಡಾಂಗಣ, ವಾಸ್ಕೊ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.