ಸೋಮವಾರ, ಡಿಸೆಂಬರ್ 6, 2021
23 °C

ಸಂತೋಷ್ ಟ್ರೋಫಿ ಫುಟ್‌ಬಾಲ್ ಟೂರ್ನಿಯ ಅರ್ಹತಾ ಹಂತದ ಹಣಾಹಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕ ತಂಡ ಸಂತೋಷ್ ಟ್ರೋಫಿ ಫುಟ್‌ಬಾಲ್ ಟೂರ್ನಿಯ ಅರ್ಹಾತ ಸುತ್ತಿನ ಪಂದ್ಯದಲ್ಲಿ ಗುರುವಾರ ಆಂಧ್ರವನ್ನು ಎದುರಿಸಲಿದೆ. ತೆಲಂಗಾಣ ತಂಡ ತಮಿಳುನಾಡು ವಿರುದ್ಧ ಸೆಣಸಲಿದ್ದು ಎರಡೂ ತಂಡಗಳು ಗೆಲುವಿನ ಓಟ ಮುಂದುವರಿಸಲು ಪ್ರಯತ್ನಿಸಲಿವೆ. 

ಮೊದಲ ಪಂದ್ಯದಲ್ಲಿ ಕರ್ನಾಟಕ ಮತ್ತು ತೆಲಂಗಾಣ ತಂಡಗಳು ತಲಾ 4–0 ಅಂತರದ ಗೆಲುವು ಸಾಧಿಸಿದ್ದವು. ಎದುರಾಳಿ ತಂಡಕ್ಕೆ ಗೋಲು ಬಿಟ್ಟುಕೊಡದೇ ಇದ್ದರೂ ಕರ್ನಾಟಕದ ಮಿಡ್‌ಫೀಲ್ಡರ್‌ಗಳಿಗೆ ಲಯ ಕಂಡುಕೊಳ್ಳಲು ಸಾಧ್ಯವಾಗಲಿಲ್ಲ. ಈ ಸಮಸ್ಯೆಗೆ ಪರಿಹಾರ ಕಂಡುಕೊಂಡರೆ ತಂಡ ಆಂಧ್ರದ ವಿರುದ್ಧ ಸುಲಭವಾಗಿ ಗೆಲ್ಲಬಹುದು. 

ಯುವ ಆಟಗಾರರನ್ನೇ ಹೊಂದಿರುವ ಆಂಧ್ರ ಆತಿಥೇಯರಿಗೆ ಯಾವ ರೀತಿ ಉತ್ತರ ನೀಡುತ್ತದೆ ಎಂಬುದು ಕುತೂಹಲ ಕೆರಳಿಸಿದೆ. ಈ ಪಂದ್ಯ ಬೆಳಿಗ್ಗೆ 11.30ಕ್ಕೆ ನಡೆಯಲಿದೆ. ತೆಲಂಗಾಣ ಮತ್ತು ತಮಿಳುನಾಡು ನಡುವಿನ ಪಂದ್ಯ ಮಧ್ಯಾಹ್ನ 3.30ಕ್ಕೆ ನಡೆಯಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.