ಮಂಗಳವಾರ, ಮಾರ್ಚ್ 31, 2020
19 °C

ಸಂತೋಷ್ ಟ್ರೋಫಿ: ರಾಜ್ಯಕ್ಕೆ ಪುದುಚೇರಿ ಮೊದಲ ಎದುರಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಂತೋಷ್ ಟ್ರೋಫಿ ಫುಟ್‌ಬಾಲ್ ಟೂರ್ನಿಯ ದಕ್ಷಿಣ ವಲಯ ಅರ್ಹತಾ ಸುತ್ತಿನ ಪಂದ್ಯಗಳು ನವೆಂಬರ್ 5ರಿಂದ ಕೇರಳದಲ್ಲಿ ನಡೆಯಲಿವೆ. ಕರ್ನಾಟಕ ತನ್ನ ಮೊದಲ ಪಂದ್ಯವನ್ನು 6ರಂದು ಪುದುಚೇರಿ ವಿರುದ್ಧ ಆಡಲಿದೆ.

ರಾಜ್ಯ ತಂಡ ‘ಬಿ’ ಗುಂಪಿನಲ್ಲಿ ಸ್ಥಾನ ಪಡೆದಿದ್ದು ಪುದುಚೇರಿ ಮತ್ತು ತೆಲಂಗಾಣ ತಂಡಗಳು ಇದೇ ಗುಂಪಿನಲ್ಲಿವೆ. ‘ಎ’ ಗುಂಪಿನಲ್ಲಿ ಕೇರಳ, ಆಂಧ್ರಪ್ರದೇಶ ಮತ್ತು ತಮಿಳುನಾಡು ತಂಡಗಳಿವೆ. 5ರಂದು ನಡೆಯಲಿರುವ ಮೊದಲ ಪಂದ್ಯದಲ್ಲಿ ಕೇರಳ ಮತ್ತು ಆಂಧ್ರಪ್ರದೇಶ ತಂಡಗಳು ಸೆಣಸಲಿವೆ. ಕರ್ನಾಟಕದ ಎರಡನೇ ಪಂದ್ಯ 8ರಂದು ತೆಲಂಗಾಣ ವಿರುದ್ಧ ನಡೆಯಲಿದೆ.

ಪ್ರತಿ ಗುಂಪಿನ ಚಾಂಪಿಯನ್ ಅಂತಿಮ ಸುತ್ತಿನ ಪಂದ್ಯಗಳಲ್ಲಿ ಪಾಲ್ಗೊಳ್ಳಲು ಅರ್ಹತೆ ಗಳಿಸಲಿವೆ ಎಂದು ಅಖಿಲ ಭಾರತ ಫುಟ್‌ಬಾಲ್ ಫೆಡರೇಷನ್ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು