ಶನಿವಾರ, ಜುಲೈ 2, 2022
22 °C

ಐಎಸ್‌ಎಲ್‌: ಜೆಮ್ಶೆಡ್‌ಪುರ ಜಯಭೇರಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಫತೋರ್ಡ: ಸಂಘಟಿತ ಆಟವಾಡಿದ ಜೆಮ್ಶೆಡ್‌ಪುರ ಎಫ್‌ಸಿ (ಜೆಎಫ್‌ಸಿ) ತಂಡವು ಇಂಡಿಯನ್ ಸೂಪರ್ ಲೀಗ್ (ಐಎಸ್‌ಎಲ್‌) ಫುಟ್‌ಬಾಲ್ ಟೂರ್ನಿಯಲ್ಲಿ ಜಯ ಗಳಿಸಿತು.

ಜವಾಹರಲಾಲ್‌ ನೆಹರೂ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ 3–2ರಿಂದ ನಾರ್ತ್ ಈಸ್ಟ್ ಯುನೈಟೆಡ್‌ ಎಫ್‌ಸಿ ತಂಡವನ್ನು ಸೋಲಿಸಿತು. ವಿಜೇತ ತಂಡದ ಪರ ಸಿಮಿನ್ಲೆಲ್ ಡಂಗೆಲ್‌ (35ನೇ ನಿಮಿಷ), ಗ್ರೇಗ್‌ ಸ್ಟೀವರ್ಟ್‌ (59ನೇ ನಿ.) ಮತ್ತು ಜೋರ್ಡಾನ್ ಮರೆ (84ನೇ ನಿ.) ಗೋಲು ದಾಖಲಿಸಿದರು.

ನಾರ್ತ್ಈಸ್ಟ್ ತಂಡದ ಲಾಲ್ದನ್‌ಮಾವಿಯಾ ರಾಲ್ಟೆ (66ನೇ ನಿ.) ಮತ್ತು ಮಾರ್ಸೆಲೊ ಪೆರೆರಾ (67ನೇ ನಿ.) ಗೋಲು ಹೊಡೆದರು.

ಕೇರಳಕ್ಕೆ ಸೆಮಿಫೈನಲ್ ಕನಸು: ವಾಸ್ಕೊದಲ್ಲಿ ಶನಿವಾರ ನಡೆಯಲಿರುವ ಪಂದ್ಯದಲ್ಲಿ ಕೇರಳ ಬ್ಲಾಸ್ಟರ್ಸ್ ಮತ್ತು ಚೆನ್ನೈಯಿನ್ ಎಫ್‌ಸಿ ತಂಡಗಳು ಸೆಣಸಲಿವೆ. ಸೆಮಿಫೈನಲ್ ಪ್ರವೇಶಿಸಬೇಕಾದರೆ ಕೇರಳ ಬ್ಲಾಸ್ಟರ್ಸ್‌ಗೆ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯ. 

ಮತ್ತೊಂದು ಪಂದ್ಯದಲ್ಲಿ ಮುಂಬೈ ಸಿಟಿ ಎಫ್‌ಸಿ ತಂಡ ಎಫ್‌ಸಿ ಗೋವಾವನ್ನು ಎದುರಿಸಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು