ಬುಧವಾರ, ಮೇ 25, 2022
29 °C
‘ಕೋಲ್ಕತ್ತ ಡರ್ಬಿ’ ಇಂದು

ಇಂಡಿಯನ್ ಸೂಪರ್ ಲೀಗ್ ಫುಟ್‌ಬಾಲ್‌ ಟೂರ್ನಿ: ಎಟಿಕೆಎಂಬಿ–ಈಸ್ಟ್ ಬೆಂಗಾಲ್ ಮುಖಾಮುಖಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮಡಗಾಂವ್‌: ಎಟಿಕೆ ಮೋಹನ್ ಬಾಗನ್ (ಎಟಿಕೆಎಂಬಿ) ತಂಡವು ಇಂಡಿಯನ್‌ ಸೂಪರ್‌ ಲೀಗ್ (ಐಎಸ್‌ಎಲ್‌) ಫುಟ್‌ಬಾಲ್ ಟೂರ್ನಿಯಲ್ಲಿ ಶನಿವಾರ ಎಸ್‌ಸಿ ಈಸ್ಟ್ ಬೆಂಗಾಲ್ ತಂಡಕ್ಕೆ ಮುಖಾಮುಖಿಯಾಗಲಿದೆ.

ಎಟಿಕೆಎಂಬಿ ತಂಡವು ಆಡಿರುವ 10 ಪಂದ್ಯಗಳಲ್ಲಿ ತಲಾ ನಾಲ್ಕು ಗೆಲುವು ಮತ್ತು ಡ್ರಾ ಸಾಧಿಸಿದ್ದು, ಎರಡರಲ್ಲಿ ಸೋಲು ಕಂಡಿದೆ. ಸದ್ಯ ಪಾಯಿಂಟ್ಸ್ ಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ.

ಆದರೆ ಎಸ್‌ಸಿ ಈಸ್ಟ್ ಬೆಂಗಾಲ್ ತಂಡವು ಕಳಪೆ ಸಾಮರ್ಥ್ಯ ತೋರಿದ್ದು, 13 ಪಂದ್ಯಗಳಲ್ಲಿ ಒಂದು ಗೆಲುವು ಮಾತ್ರ ಸಾಧಿಸಿದೆ. ತಲಾ ಆರು ಪಂದ್ಯಗಳಲ್ಲಿ ಡ್ರಾ ಮತ್ತು ಸೋಲು ಅನುಭವಿಸಿದೆ. ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿ (11ನೇ) ಇದೆ.

ಒಂದು ಪಂದ್ಯದ ಅಮಾನತಿಗೆ ಒಳಗಾಗಿದ್ದ ಹ್ಯುಗೊ ಬೌಮೊಸ್‌ ಈ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದು, ಎಟಿಕೆಎಂಬಿಯ ಬಲ ವೃದ್ಧಿಸಲಿದೆ. ಬೆಂಗಾಲ್ ತಂಡವೂ ಭಾರಿ ಪೈಪೋಟಿ ನೀಡುವ ಹುಮ್ಮಸ್ಸಿನಲ್ಲಿದೆ.

ಪಂದ್ಯ ಆರಂಭ: ರಾತ್ರಿ 7.30

ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು