ಮಂಗಳವಾರ, ಆಗಸ್ಟ್ 9, 2022
23 °C

ಅಂತರಜಿಲ್ಲಾ ಫುಟ್‌ಬಾಲ್‌: ದಕ್ಷಿಣ ಕನ್ನಡ ತಂಡಕ್ಕೆ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ದಕ್ಷಿಣ ಕನ್ನಡ ತಂಡವು ಕರ್ನಾಟಕ ರಾಜ್ಯ ಫುಟ್‌ಬಾಲ್ ಸಂಸ್ಥೆ (ಕೆಎಸ್‌ಎಫ್‌ಎ) ಆಯೋಜಿಸಿದ್ದ ಅಂತರಜಿಲ್ಲಾ ಫುಟ್‌ಬಾಲ್ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಬೆಂಗಳೂರು ಫುಟ್‌ಬಾಲ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಫೈನಲ್ ಹಣಾಹಣಿಯಲ್ಲಿ ದಕ್ಷಿಣ ಕನ್ನಡ 2–0ಯಿಂದ ಕೋಲಾರ ತಂಡಕ್ಕೆ ಸೋಲುಣಿಸಿತು. ವಿಜೇತ ತಂಡದ ಪರ ಐದನೇ ನಿಮಿಷದಲ್ಲೇ ಕಾಲ್ಚಳಕ ತೋರಿದ ಮೊಹಮ್ಮದ್ ಹಸನ್‌ ಮುನ್ನಡೆ ತಂದುಕೊಟ್ಟರು. 15ನೇ ನಿಮಿಷದಲ್ಲಿ ಫರಾಜ್ ಅಹಮ್ಮದ್‌ ಗೋಲು ದಾಖಲಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು