ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫುಟ್‌ಬಾಲ್‌: ಕಿಕ್‌ ಸ್ಟಾರ್ಟ್‌ ಎಫ್‌ಸಿಗೆ ಜಯ

Last Updated 25 ಅಕ್ಟೋಬರ್ 2018, 15:25 IST
ಅಕ್ಷರ ಗಾತ್ರ

ಬೆಂಗಳೂರು: ಕುಟ್ಟಿ ಮಣಿ ಗಳಿಸಿದ ಎರಡು ಗೋಲುಗಳ ಬಲದಿಂದ ಕಿಕ್‌ ಸ್ಟಾರ್ಟ್‌ ಎಫ್‌ಸಿ ಕರ್ನಾಟಕ ತಂಡ ಬೆಂಗಳೂರು ಜಿಲ್ಲಾ ಫುಟ್‌ಬಾಲ್‌ ಸಂಸ್ಥೆ (ಬಿಡಿಎಫ್‌ಎ) ಆಶ್ರಯದ ಸೂಪರ್‌ ಡಿವಿಷನ್‌ ಲೀಗ್‌ನ ಪಂದ್ಯದಲ್ಲಿ ಗೆದ್ದಿದೆ.

ಅಶೋಕನಗರದಲ್ಲಿರುವ ಬೆಂಗಳೂರು ಫುಟ್‌ಬಾಲ್‌ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಹೋರಾಟದಲ್ಲಿ ಕಿಕ್‌ ಸ್ಟಾರ್ಟ್‌ ಎಫ್‌ಸಿ 4–2 ಗೋಲುಗಳಿಂದ ಎಫ್‌ಸಿ ಬೆಂಗಳೂರು ಯುನೈಟೆಡ್‌ ವಿರುದ್ಧ ಗೆದ್ದಿತು.

39ನೇ ನಿಮಿಷದಲ್ಲಿ ಸಿಕ್ಕ ಪೆನಾಲ್ಟಿಯಲ್ಲಿ ಕುಟ್ಟಿಮಣಿ ಚೆಂಡನ್ನು ಗುರಿ ಮುಟ್ಟಿಸಿದರು. 71ನೇ ನಿಮಿಷದಲ್ಲೂ ಕಾಲ್ಚಳಕ ತೋರಿದರು. ದುಲೀಪ್‌ ಮತ್ತು ಮನೋಜ್‌ ಕ್ರಮವಾಗಿ 49 ಮತ್ತು 81ನೇ ನಿಮಿಷಗಳಲ್ಲಿ ಗೋಲು ಬಾರಿಸಿದರು.

ಬೆಂಗಳೂರು ಯುನೈಟೆಡ್‌ ತಂಡದ ವಿಷ್ಣು ಮತ್ತು ಅಮೋಸ್‌ ಕ್ರಮವಾಗಿ 58 ಮತ್ತು 69ನೇ ನಿಮಿಷಗಳಲ್ಲಿ ಚೆಂಡನ್ನು ಗುರಿ ಸೇರಿಸಿದರು.

‘ಎ’ ಡಿವಿಷನ್‌ ಲೀಗ್‌ನ ಪಂದ್ಯದಲ್ಲಿ ಬಿಯುಎಫ್‌ಸಿ 1–0 ಗೋಲಿನಿಂದ ಯಂಗ್‌ ಚಾಲೆಂಜರ್ಸ್‌ ಎಫ್‌ಸಿ ತಂಡವನ್ನು ಪರಾಭವಗೊಳಿಸಿತು.

ಬಿಯುಎಫ್‌ಸಿ ತಂಡದ ಸಿದ್ದಾರ್ಥ್‌ 72ನೇ ನಿಮಿಷದಲ್ಲಿ ಗೋಲು ಬಾರಿಸಿ ಗೆಲುವಿನ ರೂವಾರಿ ಎನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT