ಬುಧವಾರ, ಡಿಸೆಂಬರ್ 2, 2020
23 °C

ಆಸ್ಪತ್ರೆಯಿಂದ ಮನೆಗೆ ಮರಳಿದ ಮರಡೋನಾ

ಎಪಿ Updated:

ಅಕ್ಷರ ಗಾತ್ರ : | |

Prajavani

ಬ್ಯೂನಸ್ ಐರಿಸ್: ಮಿದುಳಿನ ಶಸ್ತ್ರಚಿಕಿತ್ಸೆಗೊಳಗಾಗಿದ್ದ ಫುಟ್‌ಬಾಲ್ ದಂತಕತೆ ಡೀಗೊ ಮರಡೋನಾ ಗುರುವಾರ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ. ಎಂಟು ದಿನಗಳ ಹಿಂದೆ ಅವರು ಇಲ್ಲಿಯ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. 

ಅವರ ಆರೋಗ್ಯ ಸ್ಥಿರವಾಗಿದ್ದು, ಮನೆಗೆ ಹೋಗಲು ಇಚ್ಛಿಸಿದ್ದರು. ಆದ್ದರಿಂದ ಅವರಿಗೆ ಅನುಮತಿ ನೀಡಲಾಗಿದೆ ಎಂದು ಒಲಿವೊಸ್ ಆಸ್ಪತ್ರೆಯ ವೈದ್ಯ ಲಿಯೊಪೊಲ್ಡೊ ಲೂಕ್ ಸ್ಥಳೀಯ ಟಿ.ವಿ. ವಾಹಿನಿಯೊಂದಕ್ಕೆ ಹೇಳಿಕೆ ನೀಡಿದ್ದಾರೆ. ಮರಡೋನಾ ಅವರು ಅಂಬುಲೆನ್ಸ್‌ನಲ್ಲಿ ಮನೆಗೆ ತೆರಳುವ ದೃಶ್ಯ ತುಣುಕನ್ನು ಟಿ.ವಿ.ಯಲ್ಲಿ ತೋರಿಸಲಾಗಿದೆ.

’ಅವರು ತಮ್ಮ ಕುಟುಂಬದ ಸದಸ್ಯರೊಂದಿಗೆ ಇರಲು ಇಚ್ಛಿಸಿದ್ದರು. ಸದ್ಯದ ಪರಿಸ್ಥಿತಿಯಲ್ಲಿ ಇದು ಅವರಿಗೆ ಅಗತ್ಯವೂ ಹೌದು. ಆಸ್ಪತ್ರೆಯಲ್ಲಿ ಅವರನ್ನು ಸದಾ ಕಾಲ ಆರೋಗ್ಯ ಸಿಬ್ಬಂದಿ ಮತ್ತು ವೈದ್ಯರು ಸುತ್ತುವರಿದಿರುತ್ತಿದ್ದರು. ಆದರೆ ಮೆನಯಲ್ಲಿಯೂ ಅವರಿಗೆ ಎಲ್ಲ ರೀತಿಯ ಆರೋಗ್ಯ ಸೌಕರ್ಯಗಳನ್ನು ಒದಗಿಸಲಾಗಿದೆ‘ ಎಂದು ವೈದ್ಯರು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು