ಶುಕ್ರವಾರ, 2 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

FIFA Awards: ಮೆಸ್ಸಿಗೆ ಫಿಫಾದ ಅತ್ಯುತ್ತಮ ಆಟಗಾರ ಪ್ರಶಸ್ತಿ

Last Updated 28 ಫೆಬ್ರವರಿ 2023, 3:07 IST
ಅಕ್ಷರ ಗಾತ್ರ

ಪ್ಯಾರಿಸ್‌: 2022ನೇ ಸಾಲಿನ ಫುಟ್‌ಬಾಲ್ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡದ ನಾಯಕ ಲಯೊನೆಲ್ ಮೆಸ್ಸಿ, ಫಿಫಾದ ಅತ್ಯುತ್ತಮ ಆಟಗಾರ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಸ್ಪೇನ್‌ನ ಅಲೆಕ್ಸಿಯಾ ಪುಟೆಲ್ಲಾಸ್ ಅವರು, ಮಹಿಳಾ ವಿಭಾಗದ ಪ್ರಶಸ್ತಿ ಗಳಿಸಿದ್ದಾರೆ.

ಇತ್ತೀಚೆಗೆ ಕತಾರ್‌ನಲ್ಲಿ ನಡೆದ ಫಿಫಾ ವಿಶ್ವಕಪ್ ಟೂರ್ನಿಯ ಫೈನಲ್‌ನಲ್ಲಿ ಫ್ರಾನ್ಸ್ ವಿರುದ್ಧ ಪೆನಾಲ್ಟಿ ಶೂಟೌಟ್‌ನಲ್ಲಿ 4-2 ಗೋಲುಗಳ ಅಂತರದ ಗೆಲುವು ದಾಖಲಿಸಿದ್ದ ಅರ್ಜೇಂಟೀನಾ ಮೂರನೇ ಬಾರಿಗೆ ಪ್ರಶಸ್ತಿ ಎತ್ತಿ ಹಿಡಿದಿತ್ತು.

36 ವರ್ಷಗಳ ಬಳಿಕ ಅರ್ಜೆಂಟೀನಾ ವಿಶ್ವಕಪ್ ಗೆದ್ದು ಸುದೀರ್ಘ ಬರವನ್ನು ನೀಗಿಸಿಕೊಂಡಿತ್ತು. ತಮ್ಮ ಕೊನೆಯ ವಿಶ್ವಕಪ್ ಫೈನಲ್‌ನಲ್ಲಿ ಎರಡು ಗೋಲು ಬಾರಿಸಿದ್ದ ಮೆಸ್ಸಿ, ಪ್ರಶಸ್ತಿ ಕನಸನ್ನು ನನಸಾಗಿಸಿಕೊಂಡಿದ್ದರು. ಗೋಲ್ಡನ್ ಬಾಲ್ ತಮ್ಮದಾಗಿಸಿಕೊಂಡಿದ್ದರು.

ಇದೇ ಪಂದ್ಯದಲ್ಲಿ ಹ್ಯಾಟ್ರಿಕ್ ಗೋಲುಗಳ ಸಾಧನೆ ಮಾಡಿದ್ದ ಎಂಬಾಪೆ ಕೂಡಾ ಪ್ರಶಸ್ತಿ ರೇಸ್‌ನಲ್ಲಿದ್ದರು.

ಬ್ರೆಜಿಲ್‌ನ ನೇಮರ್, ಅರ್ಜೇಂಟೀನಾದ ಜೂಲಿಯನ್‌ ಅಲ್ವಾರೆಜ್‌, ಕ್ರೋವೆಷಿಯಾದ ಲುಕಾ ಮೊಡ್ರಿಕ್, ಈಜಿಪ್ಟ್‌ನ ಮೊಹಮ್ಮದ್ ಸಲಾ ಸೇರಿ ಒಟ್ಟು 14 ಮಂದಿ ಪ್ರಶಸ್ತಿ ರೇಸ್‌ನಲ್ಲಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT