ಮಂಗಳವಾರ, ಆಗಸ್ಟ್ 3, 2021
22 °C
ಲಾ ಲಿಗಾ ಫುಟ್‌ಬಾಲ್‌ ಟೂರ್ನಿ

ಮೊರಾಟ ಮಿಂಚು; ಅಟ್ಲೆಟಿಕೊಗೆ ಜಯ

ಎಪಿ Updated:

ಅಕ್ಷರ ಗಾತ್ರ : | |

Prajavani

ಬಾರ್ಸಿಲೋನಾ: ಅಲವರೊ ಮೊರಾಟ ಕಾಲ್ಚಳಕದಲ್ಲಿ ಅರಳಿದ ಎರಡು ಗೋಲುಗಳ ಬಲದಿಂದ ಅಟ್ಲೆಟಿಕೊ ಮ್ಯಾಡ್ರಿಡ್‌ ತಂಡ ಲಾ ಲಿಗಾ ಫುಟ್‌ಬಾಲ್‌ ಟೂರ್ನಿಯ ಪಂದ್ಯದಲ್ಲಿ ಗೆದ್ದಿದೆ.

ಶನಿವಾರ ನಡೆದ ಹಣಾಹಣಿಯಲ್ಲಿ ಅಟ್ಲೆಟಿಕೊ ಮ್ಯಾಡ್ರಿಡ್‌ 3–0 ಗೋಲುಗಳಿಂದ ರಿಯಲ್‌ ಮಲ್ಲೋರ್ಕಾ ತಂಡವನ್ನು ಪರಾಭವಗೊಳಿಸಿತು. ಇದರೊಂದಿಗೆ ಒಟ್ಟು ಪಾಯಿಂಟ್ಸ್‌ ಅನ್ನು 62ಕ್ಕೆ ಹೆಚ್ಚಿಸಿಕೊಂಡು ಪಟ್ಟಿಯಲ್ಲಿ ಮೂರನೇ ಸ್ಥಾನ ಕಾಪಾಡಿಕೊಂಡಿತು.

ಆರಂಭದಿಂದಲೇ ಆಕ್ರಮಣಕಾರಿ ಆಟಕ್ಕೆ ಅಣಿಯಾದ ಅಟ್ಲೆಟಿಕೊ ತಂಡ 29ನೇ ನಿಮಿಷದಲ್ಲಿ ಖಾತೆ ತೆರೆಯಿತು. ಮಲ್ಲೋರ್ಕಾ ತಂಡದ ಅಲೆಕ್ಸಾಂಡರ್‌ ಸೆಡ್ಲರ್, ಉದ್ದೇಶಪೂರ್ವಕವಾಗಿ ಮೊರಾಟ ಅವರನ್ನು ತಳ್ಳಿ ನೆಲಕ್ಕೆ ಬೀಳಿಸಿದರು. ಹೀಗಾಗಿ ಅಟ್ಲೆಟಿಕೊಗೆ ಪೆನಾಲ್ಟಿ ಲಭಿಸಿತು. ಈ ಅವಕಾಶವನ್ನು ಗೋಲಾಗಿ ಪರಿವರ್ತಿಸಿದ ಮೊರಾಟ ಸಂಭ್ರಮಿಸಿದರು.

ಮೊದಲಾರ್ಧದ ಹೆಚ್ಚುವರಿ ಅವಧಿಯಲ್ಲೂ (45+4) ಮೊರಾಟ ಕಾಲ್ಚಳಕ ತೋರಿದರು. ಹೀಗಾಗಿ ಅಟ್ಲೆಟಿಕೊ ತಂಡವು 2–0 ಮುನ್ನಡೆಯೊಂದಿಗೆ ವಿರಾಮಕ್ಕೆ ಹೋಯಿತು.

ದ್ವಿತೀಯಾರ್ಧದಲ್ಲಿ ಅಟ್ಲೆಟಿಕೊ ತಂಡದವರು ಆಟದ ವೇಗವನ್ನು ಮತ್ತಷ್ಟು ಹೆಚ್ಚಿಸಿಕೊಂಡರು. 79ನೇ ನಿಮಿಷದಲ್ಲಿ‌ ಗೋಲು ದಾಖಲಿಸಿದ ಕೋಕ್‌, ತಂಡದ ಗೆಲುವನ್ನು ಖಾತರಿಪಡಿಸಿದರು. ಮಲ್ಲೋರ್ಕಾ ತಂಡವು ರಕ್ಷಣಾ ವಿಭಾಗದಲ್ಲಿ ಪರಿಣಾಮಕಾರಿಯಾಗಿ ಆಡಲು ವಿಫಲವಾಯಿತು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು