ಶನಿವಾರ, ಜುಲೈ 2, 2022
20 °C

ಐಎಸ್‌ಎಲ್‌: ಮುಂಬೈ–ಚೆನ್ನೈಯಿನ್ ಪಂದ್ಯ ಡ್ರಾ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಬ್ಯಾಂಬೊಲಿಮ್: ಮೊದಲಾರ್ಧದಲ್ಲಿ ಗೋಲು ಗಳಿಸಿ ಸಂಭ್ರಮಿಸಿದ್ದ ಮುಂಬೈ ಸಿಟಿ ಎಫ್‌ಸಿಗೆ ದ್ವಿತೀಯಾರ್ಧದಲ್ಲಿ ಚೆನ್ನೈಯಿನ್ ಎಫ್‌ಸಿ ತಿರುಗೇಟು ನೀಡಿತು. ಜಿಎಂಸಿ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಇಂಡಿಯನ್ ಸೂಪರ್ ಲೀಗ್ (ಐಎಸ್‌ಎಲ್‌) ಫುಟ್‌ಬಾಲ್ ಟೂರ್ನಿಯ ಪಂದ್ಯವನ್ನು ಉಭಯ ತಂಡಗಳು 1–1 ಗೋಲುಗಳಿಂದ ಡ್ರಾ ಮಾಡಿಕೊಂಡವು.

ಜಿದ್ದಾಜಿದ್ದಿಯ ಆಟಕ್ಕೆ ಸಾಕ್ಷಿಯಾದ ಪಂದ್ಯದ 21ನೇ ನಿಮಿಷದಲ್ಲಿ ಬಾರ್ತೊಲೊಮೆ ಒಗ್ಬೆಚೆ ಹೆಡರ್ ಮೂಲಕ ಗಳಿಸಿದ ಗೋಲಿನ ಮೂಲಕ ಮುಂಬೈ ಸಿಟಿ ಎಫ್‌ಸಿ ಮುನ್ನಡೆ ಸಾಧಿಸಿತು. 76ನೇ ನಿಮಿಷದಲ್ಲಿ ಲಭಿಸಿದ ಪೆನಾಲ್ಟಿಯಲ್ಲಿ ಚೆಂಡನ್ನು ಗುರಿ ಮುಟ್ಟಿಸಿದ ಎಸ್ಮಾ ಅವರು ಚೆನ್ನೈಯಿನ್ ಪಾಳಯದಲ್ಲಿ ಸಂಭ್ರಮ ಮೂಡಿಸಿದರು. ಮುಂಬೈ 13 ಪಂದ್ಯಗಳಲ್ಲಿ 30 ಪಾಯಿಂಟ್ ಗಳಿಸಿ ಪಾಯಿಂಟ್ ಪಟ್ಟಿಯ ಅಗ್ರಸ್ಥಾನದಲ್ಲಿದೆ. ಚೆನ್ನೈಯಿನ್ 14 ‍ಪಂದ್ಯಗಳಲ್ಲಿ 16 ‍ಪಾಯಿಂಟ್ ಗಳಿಸಿ ಐದನೇ ಸ್ಥಾನದಲ್ಲಿದೆ.

ಮಂಗಳವಾರ ಫತೋರ್ಡ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ನಾರ್ತ್ ಈಸ್ಟ್ ಯುನೈಟೆಡ್ ಮತ್ತು ಎಟಿಕೆ ಮೋಹನ್ ಬಾಗನ್ ತಂಡಗಳು ಸೆಣಸಲಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು