ಮಂಗಳವಾರ, ಅಕ್ಟೋಬರ್ 26, 2021
26 °C

ವಿಶ್ವಕಪ್ ಲಾಂಛನ ಇಭಾ ಬಿಡುಗಡೆ ಮಾಡಿದ ಫಿಫಾ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಭಾರತದಲ್ಲಿ ಮುಂದಿನ ವರ್ಷ ನಡೆಯಲಿರುವ 17 ವರ್ಷದೊಳಗಿನ ಮಹಿಳೆಯರ ವಿಶ್ವಕಪ್‌ ಪುಟ್‌ಬಾಲ್ ಟೂರ್ನಿಯ ಅಧಿಕೃತ ಲಾಂಛನ ‘ಇಭಾ’ವನ್ನು ಫಿಫಾ ಸೋಮವಾರ ಬಿಡುಗಡೆ ಮಾಡಿದೆ.

ಮಹಿಳೆಯರು ಮತ್ತು ಬಾಲಕಿಯರಲ್ಲಿರುವ ಪ್ರತಿಭೆಯನ್ನು ಜಗತ್ತಿಗೆ ಸಾರಿ ಹೇಳುವುದು ‘ಇಭಾ’ದ ಉದ್ದೇಶವಾಗಿದೆ ಎಂದು ಫಿಫಾ ತಿಳಿಸಿದೆ. 

ಮುಂದಿನ ವರ್ಷದ ಅಕ್ಟೋಬರ್ 11ರಿಂದ 30ರ ವರೆಗೆ ಟೂರ್ನಿ ನಡೆಯಲಿದೆ. ಟೂರ್ನಿಗೆ ಸಂಬಂಧಿಸಿದಂತೆ ಇದೊಂದು ಮಹತ್ವದ ಮೈಲುಗಲ್ಲಾಗಿದೆ ಎಂದು ಸ್ಥಳೀಯ ಆಯೋಜನಾ ಸಮಿತಿ ಅಧ್ಯಕ್ಷ ಮತ್ತು ಅಖಿಲ ಭಾರತ ಫುಟ್‌ಬಾಲ್ ಸಮಿತಿಯ ಅಧ್ಯಕ್ಷ ಪ್ರಫುಲ್ ಪಟೇಲ್ ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು