ಶನಿವಾರ, ಫೆಬ್ರವರಿ 4, 2023
28 °C

FIFA World Cup | ಬೆಲ್ಜಿಯಂ, ನೆದರ್ಲೆಂಡ್ಸ್‌ನಲ್ಲಿ ಹಿಂಸಾಚಾರ

ಎಪಿ Updated:

ಅಕ್ಷರ ಗಾತ್ರ : | |

ಬ್ರಸೆಲ್ಸ್‌: ವಿಶ್ವಕಪ್‌ ಟೂರ್ನಿಯ ಪಂದ್ಯದಲ್ಲಿ ಬೆಲ್ಜಿಯಂ ತಂಡ ಮೊರೊಕ್ಕೊ ಕೈಯಲ್ಲಿ 0–2 ರಲ್ಲಿ ಆಘಾತಕಾರಿ ಸೋಲು ಅನುಭವಿಸಿದ ಬೆನ್ನಲ್ಲೇ ಬೆಲ್ಜಿಯಂ ಮತ್ತು ನೆದರ್ಲೆಂಡ್ಸ್‌ನ ಕೆಲವು ನಗರಗಳಲ್ಲಿ ಹಿಂಸಾಚಾರ ಘಟನೆ ನಡೆದಿದೆ.

ಬೆಲ್ಜಿಯಂ ಮತ್ತು ನೆದರ್ಲೆಂಡ್ಸ್‌ನ ಕೆಲವು ನಗರಗಳಲ್ಲಿ ಮೊರೊಕ್ಕೊದಿಂದ ವಲಸೆ ಬಂದಿರುವ ನೂರಾರು ಮಂದಿ ನೆಲೆಸಿದ್ದಾರೆ. ಅವರು ಮೊರೊಕ್ಕೊ ಗೆಲುವಿನ ಸಂಭ್ರಮ ಆಚರಿಸಿದ್ದು ಘರ್ಷಣೆಗೆ ಕಾರಣವಾಗಿದೆ.

ಬ್ರಸೆಲ್ಸ್‌ನಲ್ಲಿ ಸಂಭ್ರಮಾಚರಣೆ ವೇಳೆ ಹಲವು ಕಾರುಗಳನ್ನು ಜಖಂಗೊಳಿಸಲಾಗಿದ್ದು, ದ್ವಿಚಕ್ರ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಇಲ್ಲಿ 10ಕ್ಕೂ ಅಧಿಕ ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನೆದರ್ಲೆಂಡ್ಸ್‌ನ ರೋಟರ್‌ಡ್ಯಾಂನಲ್ಲಿ ಸುಮಾರು 500 ರಷ್ಟಿದ್ದ ಫುಟ್‌ಬಾಲ್‌ ಅಭಿಮಾನಿಗಳು ಪೊಲೀಸರತ್ತ ಕಲ್ಲು ತೂರಾಟ ನಡೆಸಿದ್ದಾರೆ. ರಾಜಧಾನಿ ಆಮ್‌ಸ್ಟರ್‌ಡ್ಯಾಂ ಮತ್ತು ದಿ ಹೇಗ್‌ನಲ್ಲೂ ಘರ್ಷಣೆ ನಡೆದಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು