ಶನಿವಾರ, 10 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫುಟ್‌ಬಾಲ್‌ : ರಿಯಾದ್‌ನಲ್ಲಿ ಸಂತೋಷ್‌ ಟ್ರೋಫಿ ಫೈನಲ್‌

Last Updated 9 ಫೆಬ್ರವರಿ 2023, 15:46 IST
ಅಕ್ಷರ ಗಾತ್ರ

ಭುವನೇಶ್ವರ: ಸಂತೋಷ್‌ ಟ್ರೋಫಿ ಫುಟ್‌ಬಾಲ್‌ ಟೂರ್ನಿಯ ಸೆಮಿಫೈನಲ್‌ಗಳು ಮತ್ತು ಫೈನಲ್‌ ಪಂದ್ಯ ಸೌದಿ ಅರೇಬಿಯಾದ ರಿಯಾದ್‌ನಲ್ಲಿ ನಡೆಯಲಿದೆ.

ರಿಯಾದ್‌ನ ಕಿಂಗ್‌ ಫಹದ್‌ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮಾರ್ಚ್ 1 ರಿಂದ 4ರ ವರೆಗೆ ಈ ಪಂದ್ಯಗಳು ಆಯೋಜನೆಯಾಗಿವೆ ಎಂದು ಅಖಿಲ ಭಾರತ ಫುಟ್‌ಬಾಲ್‌ ಫೆಡರೇಷನ್‌ (ಎಐಎಫ್‌ಎಫ್‌) ಕಾರ್ಯದರ್ಶಿ ಶಾಜಿ ಪ್ರಭಾಕರನ್‌ ಗುರುವಾರ ತಿಳಿಸಿದರು.

‘ದೇಶದ ಫುಟ್‌ಬಾಲ್‌ಗೆ ಇದು ಮಹತ್ವದ ಕ್ಷಣವಾಗಿದೆ. ಸೆಮಿ ಪ್ರವೇಶಿಸುವ ನಾಲ್ಕು ತಂಡಗಳು ಸೌದಿ ಅರೇಬಿಯಾದಲ್ಲಿ ಆಡುವ ಅವಕಾಶ ಪಡೆಯಲಿವೆ. 1941 ರಲ್ಲಿ ಆರಂಭವಾದ ಸಂತೋಷ್‌ ಟ್ರೋಫಿ ಟೂರ್ನಿಯ ಇತಿಹಾಸದಲ್ಲಿ ಪಂದ್ಯಗಳು ವಿದೇಶಿ ನೆಲದಲ್ಲಿ ನಡೆಯಲಿರುವುದು ಇದೇ ಮೊದಲು’ ಎಂದರು.

ಸಂತೋಷ್‌ ಟ್ರೋಫಿ ಟೂರ್ನಿಯ ಅಂತಿಮ ಹಂತದಲ್ಲಿ ಒಟ್ಟು 12 ತಂಡಗಳು ಪೈಪೋಟಿ ನಡೆಸಲಿವೆ. ಆರು ತಂಡಗಳ ಎರಡು ಗುಂಪುಗಳನ್ನಾಗಿ ವಿಂಗಡಿಸಿ, ರೌಂಡ್ ರಾಬಿನ್ ಲೀಗ್‌ ಮಾದರಿಯಲ್ಲಿ ಪಂದ್ಯಗಳನ್ನು ಆಯೋಜಿಸಲಾಗುತ್ತದೆ. ಪ್ರತಿ ಗುಂಪಿನಲ್ಲಿ ಮೊದಲ ಎರಡು ಸ್ಥಾನಗಳನ್ನು ಪಡೆಯುವ ತಂಡಗಳು ರಿಯಾದ್‌ನಲ್ಲಿ ಸೆಮಿ ಆಡಲು ಅವಕಾಶ ಗಿಟ್ಟಿಸಿಕೊಳ್ಳಲಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT