ಸೋಮವಾರ, ನವೆಂಬರ್ 23, 2020
22 °C

ಮಿಂಚಿದ ರೊನಾಲ್ಡೊ: ಯುವೆಂಟಸ್ ಜಯಭೇರಿ

ಎಪಿ Updated:

ಅಕ್ಷರ ಗಾತ್ರ : | |

ಗೋಲು ಗಳಿಸಲು ಮುನ್ನುಗ್ಗಿದ ಕ್ರಿಸ್ಟಿಯಾನೊ ರೊನಾಲ್ಡೊ (ಬಲ)–ಎಎಫ್‌ಪಿ ಚಿತ್ರ

ಮಿಲಾನ್‌: ಕ್ರಿಸ್ಟಿಯಾನೊ ರೊನಾಲ್ಡೊ ಗಳಿಸಿದ ಎರಡು ಗೋಲುಗಳ ಬಲದಿಂದ ಯುವೆಂಟಸ್‌ ತಂಡವು ಸೀರಿ ಎ ಫುಟ್‌ಬಾಲ್‌ ಟೂರ್ನಿಯಲ್ಲಿ ಶನಿವಾರ ಕ್ಯಾಗ್ಲಿಯರಿ ತಂಡವನ್ನು 2–0ಯಿಂದ ಸೋಲಿಸಿತು.

ಕಳೆದ ಐದು ಪಂದ್ಯಗಳಲ್ಲಿ ಪೋರ್ಚುಗಲ್ ರಾಷ್ಟ್ರೀಯ ತಂಡದ ಆಟಗಾರ ರೊನಾಲ್ಡೊ ಎಂಟು ಗೋಲು ಗಳಿಸಿದ್ದಾರೆ. ಈ ಪಂದ್ಯದಲ್ಲಿ ಅವರು 38 ಹಾಗೂ 42ನೇ ನಿಮಿಷಗಳಲ್ಲಿ ಕಾಲ್ಚಳಕ ತೋರಿದರು.

ಈ ಗೆಲುವಿನೊಂದಿಗೆ ಯುವೆಂಟಸ್‌ ತಂಡವು ಪಾಯಿಂಟ್ಸ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಏರಿತು. ಎಸಿ ಮಿಲಾನ್‌ ಮೊದಲ ಸ್ಥಾನದಲ್ಲಿದೆ. ಮೂರನೇ ಸ್ಥಾನದಲ್ಲಿ ಸಸ್ಸುವೊಲೊ ತಂಡವಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು