ಸ್ಯಾಫ್‌ ಕಪ್‌ ಫುಟ್‌ಬಾಲ್‌: ಸೆಮಿಫೈನಲ್‌ ಪ್ರವೇಶಿಸಿದ ಭಾರತ

7
ಮಾಲ್ಡೀವ್ಸ್‌ಗೆ ನಿರಾಸೆ

ಸ್ಯಾಫ್‌ ಕಪ್‌ ಫುಟ್‌ಬಾಲ್‌: ಸೆಮಿಫೈನಲ್‌ ಪ್ರವೇಶಿಸಿದ ಭಾರತ

Published:
Updated:

ಢಾಕಾ: ಅಮೋಘ ಆಟ ಆಡಿದ ಭಾರತ ತಂಡದವರು ದಕ್ಷಿಣ ಏಷ್ಯನ್‌ ಫುಟ್‌ಬಾಲ್‌ ಫೆಡರೇಷನ್‌ ಕಪ್‌ (ಸ್ಯಾಫ್‌) ಟೂರ್ನಿಯಲ್ಲಿ ಸೆಮಿಫೈನಲ್ ಪ್ರವೇಶಿಸಿದ್ದಾರೆ.

ಬಂಗಬಂಧು ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಹಣಾಹಣಿಯಲ್ಲಿ ಭಾರತ 2–0 ಗೋಲುಗಳಿಂದ ಮಾಲ್ಡೀವ್ಸ್‌ ತಂಡವನ್ನು ಪರಾಭವಗೊಳಿಸಿತು.

ಇದರೊಂದಿಗೆ ಒಟ್ಟು ಪಾಯಿಂಟ್ಸ್‌ ಅನ್ನು ಆರಕ್ಕೆ ಹೆಚ್ಚಿಸಿಕೊಂಡು ‘ಬಿ’ ಗುಂಪಿನ ಪಾಯಿಂಟ್ಸ್‌ ಪಟ್ಟಿಯಲ್ಲಿ  ಅಗ್ರಸ್ಥಾನ ಗಳಿಸಿತು.

ಬುಧವಾರ ನಡೆಯುವ ಸೆಮಿಫೈನಲ್‌ನಲ್ಲಿ ಭಾರತ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಸೆಣಸಲಿದೆ.

ಆರಂಭದಿಂದಲೇ ಆಕ್ರಮಣಕಾರಿ ಆಟಕ್ಕೆ ಮುಂದಾದ ಭಾರತಕ್ಕೆ 11ನೇ ನಿಮಿಷದಲ್ಲಿ ಖಾತೆ ತೆರೆಯುವ ಅವಕಾಶ ಸಿಕ್ಕಿತ್ತು. ಅನಿರುದ್ಧ್‌ ಥಾಪಾ ನೀಡಿದ ಪಾಸ್‌ನಲ್ಲಿ ಚೆಂಡನ್ನು ಗುರಿ ಮುಟ್ಟಿಸಲು ನಿಖಿಲ್‌ ವಿಫಲರಾದರು.

ನಂತರವೂ ಭಾರತಕ್ಕೆ ಹಲವು ಅವಕಾಶಗಳು ಸಿಕ್ಕಿದ್ದವು. ಇವುಗಳನ್ನು ಸದುಪಯೋಗಪಡಿಸಿಕೊಳ್ಳಲು ಆಗಲಿಲ್ಲ.

ಭಾರತದ ಸತತ ಪ್ರಯತ್ನಕ್ಕೆ 36ನೇ ನಿಮಿಷದಲ್ಲಿ ಯಶಸ್ಸು ಸಿಕ್ಕಿತು. ನಿಖಿಲ್‌ ಪೂಜಾರಿ ಅಮೋಘ ರೀತಿಯಲ್ಲಿ ಚೆಂಡನ್ನು ಗುರಿ ಸೇರಿಸಿದರು. ಈ ಮೂಲಕ ಅಂತರರಾಷ್ಟ್ರೀಯ ಫುಟ್‌ಬಾಲ್‌ನಲ್ಲಿ ಮೊದಲ ಗೋಲು ಗಳಿಸಿದ ಸಾಧನೆ ಮಾಡಿದರು.

45ನೇ ನಿಮಿಷದಲ್ಲಿ ಮನ್ವೀರ್‌ ಸಿಂಗ್‌ ಕಾಲ್ಚಳಕ ತೋರಿದರು. ಹೀಗಾಗಿ ಭಾರತ 2–0ರ ಮುನ್ನಡೆಯೊಂದಿಗೆ ವಿರಾಮಕ್ಕೆ ಹೋಯಿತು.

ದ್ವಿತೀಯಾರ್ಧದಲ್ಲೂ ಭಾರತದ ಆಟಗಾರರು ಪರಿಣಾಮಕಾರಿ ಸಾಮರ್ಥ್ಯ ತೋರಿ ಗೆಲುವಿನ ತೋರಣ ಕಟ್ಟಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !