ಬುಧವಾರ, ಅಕ್ಟೋಬರ್ 23, 2019
20 °C

ಫುಟ್‌ಬಾಲ್‌: ಭಾರತಕ್ಕೆ ಮಾಲ್ಡೀವ್ಸ್ ಸವಾಲು

Published:
Updated:

ಕಠ್ಮಂಡು: ಉತ್ತಮ ಲಯ ಮುಂದುವರಿಸುವ ತವಕದಲ್ಲಿರುವ ಭಾರತ, 18 ವರ್ಷದೊಳಗಿನವರ ಸ್ಯಾಫ್‌ ಫುಟ್‌ಬಾಲ್‌ ಚಾಂಪಿಯನ್‌ಷಿಪ್‌ನ ಸೆಮಿಫೈನಲ್‌ನಲ್ಲಿ ಶುಕ್ರವಾರ ಮಾಲ್ಡೀವ್ಸ್ ತಂಡವನ್ನು ಎದುರಿಸಲಿದೆ.

ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಭಾರತ ಗೋಲುರಹಿತ ಡ್ರಾ ಸಾಧಿಸಿತ್ತು. ಗುಂಪು ಹಂತದ ಎರಡನೇ ಹಾಗೂ ಕೊನೆಯ ಪಂದ್ಯದಲ್ಲಿ ಶ್ರೀಲಂಕಾ ತಂಡದ ಎದುರು 3–0ಯಿಂದ ಜಯ ಸಾಧಿಸಿತ್ತು.

‘ತರಬೇತಿ ಅವಧಿಯಲ್ಲಿ ಅಭ್ಯಸಿಸಿದ ತಂತ್ರಗಳನ್ನು ಪಂದ್ಯದ ಅವಧಿಯಲ್ಲಿ ಅಳವಡಿಸಿಕೊಳ್ಳಬೇಕು. ಗೋಲು ಗಳಿಸುವ ಉತ್ತಮ ಅವಕಾಶಗಳನ್ನು ಸೃಷ್ಟಿಸಿಕೊಳ್ಳಬೇಕು. ಟೂರ್ನಿ ಮುಂದುವರಿದಂತೆ ತಂಡದ ಪ್ರದರ್ಶನದಲ್ಲಿ ಸುಧಾರಣೆ ಕಾಣುತ್ತಿದೆ’ ಎಂದು ಭಾರತ ತಂಡದ ಕೋಚ್‌ ಫ್ಲಾಯ್ಡ್ ಪಿಂಟೊ ಹೇಳಿದ್ದಾರೆ.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರತಿಕ್ರಿಯಿಸಿ (+)