ಶನಿವಾರ, ಜನವರಿ 22, 2022
16 °C

ಸಂತೋಷ್‌ ಟ್ರೋಫಿ: ಕರ್ನಾಟಕ ಜಯಭೇರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ತೆಲಂಗಾಣ ಎದುರು ಜಯಭೇರಿ ಬಾರಿಸಿದ ಕರ್ನಾಟಕ ತಂಡವು ಸಂತೊಷ್ ಟ್ರೋಫಿ ಫುಟ್‌ಬಾಲ್‌ ಚಾಂಪಿಯನ್‌ಷಿಪ್‌ನ ಅಂತಿಮ ಸುತ್ತು ಪ್ರವೇಶಿಸಿತು.

ಬೆಂಗಳೂರು ಫುಟ್‌ಬಾಲ್‌ ಕ್ರೀಡಾಂಗಣದಲ್ಲಿ ನಡೆದ ಅರ್ಹತಾ ಪಂದ್ಯದಲ್ಲಿ ರಾಜ್ಯ ತಂಡಕ್ಕೆ 2–0ಯಿಂದ ಜಯ ಒಲಿಯಿತು. ಕರ್ನಾಟಕ ತಂಡದ ಎನ್‌. ಸೋಲೈಮಲಾಯಿ ಅವರು 10ನೇ ನಿಮಿಷದಲ್ಲಿ ದೊರೆತ ಪೆನಾಲ್ಟಿ ಅವಕಾಶದಲ್ಲಿ ಮೊದಲ ಗೋಲು ದಾಖಲಿಸಿದರು. ಬಳಿಕ ಉಭಯ ತಂಡಗಳು ಗೋಲು ಗಳಿಕೆಗಾಗಿ ಜಿದ್ದಾಜಿದ್ದಿನ ಪೈಪೋಟಿ ನಡೆಸಿದವು.

74ನೇ ನಿಮಿಷದಲ್ಲಿ ಬಾವು ನಿಷಾದ್‌ ಕಾಲ್ಚಳಕ ತೋರುವುದರೊಂದಿಗೆ ಕರ್ನಾಟಕದ ಗೆಲುವನ್ನು ಬಹುತೇಕ ಖಚಿತಪಡಿಸಿದರು. ಆಡಿದ ಮೂರು ಪಂದ್ಯಗಳನ್ನು ಗೆದ್ದಿರುವ ತಂಡವು ಒಂಬತ್ತು ಪಾಯಿಂಟ್ಸ್‌ನೊಂದಿಗೆ ಪಟ್ಟಿಯಲ್ಲಿ ಅಗ್ರಸ್ಥಾನ ಗಳಿಸಿತು.

ಮತ್ತೊಂದು ಪಂದ್ಯದಲ್ಲಿ ತಮಿಳು ನಾಡು 1–0ಯಿಂದ ಆಂಧ್ರ ಎದುರು ಗೆದ್ದಿತು.

ತಂಡದ ಪರ ಸೆಂಥಮಿಳಿ 39ನೇ ನಿಮಿಷದಲ್ಲಿ ಗೋಲು ಹೊಡೆದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು